ರಾಜ್ಯ

ರಾಜ್ಯದ ಐದು ರೈಲು ನಿಲ್ದಾಣ ಸೇರಿ 103 ಅಮೃತ್ ನಿಲ್ದಾಣಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಕೊಪ್ಪಳ ಜಿಲ್ಲೆಯ ಮುನಿರಾಬಾದ್, ಬಾಗಲಕೋಟೆ, ಗದಗ, ಬೆಳಗಾವಿ ಜಿಲ್ಲೆಯ ಗೋಕಾಕ್ ರಸ್ತೆ ಮತ್ತು ಧಾರವಾಡ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣ ಯೋಜನೆ(ಎಬಿಎಸ್ಎಸ್) ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.

ರಾಜ್ಯದ ಐದು ರೈಲು ನಿಲ್ದಾಣ ಸೇರಿ 103 ಅಮೃತ್ ನಿಲ್ದಾಣಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ
Published On :

ಬೆಂಗಳೂರು: ಕರ್ನಾಟಕದ ಐದು ರೈಲು ನಿಲ್ದಾಣಗಳು ಸೇರಿದಂತೆ ದೇಶಾದ್ಯಂತ 103 'ಅಮೃತ್ ನಿಲ್ದಾಣ'ಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಜಸ್ಥಾನದ ಬಿಕಾನೇರ್‌ನಿಂದ ವರ್ಚುವಲ್ ಮೂಲಕ ಉದ್ಘಾಟಿಸಿದರು.

ಕೊಪ್ಪಳ ಜಿಲ್ಲೆಯ ಮುನಿರಾಬಾದ್, ಬಾಗಲಕೋಟೆ, ಗದಗ, ಬೆಳಗಾವಿ ಜಿಲ್ಲೆಯ ಗೋಕಾಕ್ ರಸ್ತೆ ಮತ್ತು ಧಾರವಾಡ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣ ಯೋಜನೆ(ಎಬಿಎಸ್ಎಸ್) ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಈ ಐದು ನಿಲ್ದಾಣಗಳನ್ನು ಪ್ರಧಾನಿ ಮೋದಿ ಇಂದು ಕಾರ್ಪಣೆಗೊಳಿಸಿದರು.

ಧಾರವಾಡ ರೈಲು ನಿಲ್ದಾಣವನ್ನು17.1 ಕೋಟಿ ರೂ. ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲಾಗಿದೆ. ಪ್ರಮುಖ ಸುಧಾರಣೆಗಳಲ್ಲಿ ಹೊಸ 2ನೇ ಪ್ರವೇಶ ದ್ವಾರ, ಎಲ್ಲಾ ಪ್ಲಾಟ್‌ಫಾಮ್ರ್ಗಳನ್ನು ಸಂಪರ್ಕಿಸುವ 12 ಮೀ. ಅಗಲದ ಪಾದಚಾರಿ ಸೇತುವೆ ಮತ್ತು ಸುಲಭ ಪ್ರವೇಶಕ್ಕಾಗಿ 3 ಲಿಫ್ಟ್ಗಳು ಸೇರಿವೆ. ಪ್ಲಾಟ್‌ಫಾರ್ಮ್‌ 1ರಲ್ಲಿ 2 ಎಸ್ಕಲೇಟರ್ಗಳನ್ನು ಅಳವಡಿಸಲಾಗಿದೆ.

ಬಾಗಲಕೋಟೆ ರೈಲು ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಉದ್ಘಾಟನೆ ನೆರವೇರಿಸಿದರು.

18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 86 ಜಿಲ್ಲೆಗಳಲ್ಲಿ 103 ಅಮೃತ್ ನಿಲ್ದಾಣಗಳನ್ನು 1,100 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ದೇಶದಲ್ಲಿ 1,300 ಕ್ಕೂ ಹೆಚ್ಚು ನಿಲ್ದಾಣಗಳನ್ನು ಆಧುನಿಕ ಸೌಲಭ್ಯಗಳೊಂದಿಗೆ ಪುನರಾಭಿವೃದ್ಧಿ ಮಾಡಲಾಗುತ್ತಿದೆ. ಪ್ರಾದೇಶಿಕ ವಾಸ್ತುಶಿಲ್ಪವನ್ನು ಪ್ರತಿಬಿಂಬಿಸಲು ಮತ್ತು ಎಬಿಎಸ್ಎಸ್ ಅಡಿಯಲ್ಲಿ ಪ್ರಯಾಣಿಕರ ಸೌಲಭ್ಯಗಳನ್ನು ಹೆಚ್ಚಿಸಲಾಗಿದ್ದು, ತಡರಾತ್ರಿ ರೈಲು ಪ್ರಯಾಣ ಇದ್ದರೆ ಪ್ರಯಾಣಿಕರು ನಿಲ್ದಾಣದಲ್ಲಿಯೇ ತಂಗಲು ವ್ಯವಸ್ಥೆ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.