ನಟ ದರ್ಶನ್-ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ
ದರ್ಶನ್ ತಮ್ಮ ಮೈಸೂರು ಫಾರಂ ಹೌಸ್ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದಕ್ಕೆ ಈ ಹಿಂದೆ ಪ್ರಕರಣ ದಾಖಲಾಗಿತ್ತು.

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕಿ ಇತ್ತೀಚೆಗಷ್ಟೇ 22 ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ ಎದುರಾಗಿದೆ.
ದರ್ಶನ್ ತಮ್ಮ ಮೈಸೂರು ಫಾರಂ ಹೌಸ್ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದಕ್ಕೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನರಸೀಪುರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
‘ಬಾರ್ ಹೆಡೆಡ್ ಗೂಸ್’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್ ಅವರ ಮೈಸೂರಿನ ಕೆಂಪಯ್ಯನ ಹುಂಡಿಯಲ್ಲಿರುವ ತೋಟದ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದರು.
ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿ ಜುಲೈ 4 ರಂದು ನ್ಯಾಯಾಲಯಕ್ಕೆ ಜರಾಗುವಂತೆ ಸೂಚಿಸಿದೆ.
ಬಾರ್ ಹೆಡೆಡ್ ಗೂಸ್ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ಇವು ವಲಸೆ ಹಕ್ಕಿಗಳಾಗಿವೆ, ಈ ಹಕ್ಕಿಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧ ಎನಿಸಿಕೊಂಡಿದೆ. ದರ್ಶನ್ ಫಾರಂ ಹೌಸ್ನಲ್ಲಿ ಹಲವು ವಿಧದ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಇವುಗಳ ಫೋಟೋ-ವಿಡಿಯೊಗಳು ಈ ಹಿಂದೆ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



