ಬೆಂಗಳೂರು: ಹೆಬ್ಬಾಳ ಫ್ಲೈ ಓವರ್ ಮೇಲೆ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ
ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದ್ದು, ಲಾರಿ ಚಾಲಕ ಮೃತಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಕಾರು ಡಿಕ್ಕಿಯಾಗಿದೆ. ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದೆ.

ಬೆಂಗಳೂರು: ಹೆಬ್ಬಾಳದ ಕೊಡಿಗೇಹಳ್ಳಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಲಾರಿ ಚಾಲಕರೊಬ್ಬರು ಸಾವಿಗೀಡಾಗಿದ್ದಾರೆ.
ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದ್ದು, ಲಾರಿ ಚಾಲಕ ಮೃತಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಕಾರು ಡಿಕ್ಕಿಯಾಗಿದೆ. ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದೆ.
ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಹೆಬ್ಬಾಳ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದೆ. 10 ವ್ಹೀಲರ್ ಓಪನ್ ಬಾಡಿ ವಾಹನ, ಕಸದ ಲಾರಿ ಮತ್ತು ಎರ್ಟಿಗಾ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಈ ಪರಿಣಾಮ ರಸ್ತೆ ಮೇಲೆಯೇ ಕಲ್ಲು ತುಂಬಿದ್ದ ಟ್ರಕ್ ಪಲ್ಟಿ ಹೊಡೆದಿದೆ.
ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು, ಕಸದ ಲಾರಿ ಚಾಲಕ ಫಯಾಜ್ ಅಹಮ್ಮದ್ ಸಾವನಪ್ಪಿದ್ದಾರೆ. ಕಸದ ಲಾರಿಗೆ ಕಲ್ಲಿನ ಬ್ಲಾಕ್ ತುಂಬಿಕೊಂಡಿದ್ದ 10 ವ್ಹೀಲರ್ ವಾಹನ ಹಿಂಬದಿಯಿಂದ ಡೆಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಕಲ್ಲು ತುಂಬಿದ್ದ ಟ್ರಕ್ ರಸ್ತೆಯಲ್ಲೇ ಪಲ್ಟಿ ಹೊಡೆದಿದೆ. ಈ ವೇಳೆ ಕಸದ ಲಾರಿ ಮತ್ತು ಟ್ರಕ್ ಮಧ್ಯೆ ಸಿಲುಕಿ ಚಾಲಕ ಸಾವನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



