2025-26ನೇ ಶೈಕ್ಷಣಿಕ ವರ್ಷಕ್ಕೆ 51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಒಪ್ಪಿಗೆ
ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ.

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2025-26ನೇ ಸಾಲಿನಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿ ಶುಕ್ರವಾರ ಆದೇಶಿಸಿದೆ.
ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ. ಮೇ 29 ರಂದು ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾದಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ನಿಗದಿತ ಸಮಯಕ್ಕೆ ಪುನರಾರಂಭವಾಗುವಂತೆ ಮತ್ತು ಸುಗಮವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವ ಉದ್ದೇಶದಿಂದ ಸರ್ಕಾರ ನೇಮಕಕ್ಕೆ ಮುಂದಾಗಿದೆ.
ಈ ಹಂಚಿಕೆಯು ರಾಜ್ಯದ ಮೂಲಭೂತ ಮತ್ತು ಮಾಧ್ಯಮಿಕ ಶಿಕ್ಷಣದ ಹಂತಗಳನ್ನು ಬಲಪಡಿಸುವ ಉದ್ದೇಶ ಹೊಂದಿದೆ. ನೇಮಕಾತಿಗಳು ತಾತ್ಕಾಲಿಕ ಸ್ವರೂಪದ್ದಾಗಿರುತ್ತವೆ, ನಿಯಮಿತ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಇರುತ್ತದೆ. ಬೋಧನಾ ಸಿಬ್ಬಂದಿಯಲ್ಲಿನ ತಕ್ಷಣದ ಅಂತರವನ್ನು ಕಡಿಮೆ ಮಾಡಲು ಮತ್ತು ಶಿಕ್ಷಕರ ಕೊರತೆಯಿಂದಾಗಿ ನಮ್ಮ ವಿದ್ಯಾರ್ಥಿಗಳು ತೊಂದರೆ ಅನುಭವಿಸದಂತೆ ನೋಡಿಕೊಳ್ಳಲು ಈ ನಿರ್ಧಾರವು ನಿರ್ಣಾಯಕವಾಗಿದೆ" ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಹೊಸ ಶೈಕ್ಷಣಿಕ ವರ್ಷದ ಮೊದಲ ದಿನದಿಂದಲೇ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ ಎಂದು ಅವರು ಹೇಳಿದರು. ಈ 51,000 ಅತಿಥಿ ಶಿಕ್ಷಕರುಗಳ ಗೌರವಧನ ಪಾವತಿಗಾಗಿ ಅಗತ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಉಪನ್ಯಾಸಕರ ಜಿಲ್ಲಾ/ತಾಲೂಕುವಾರು ವಿವರಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಇಲಾಖಾ ಆಯುಕ್ತರು, ಅಪರ ಆಯುಕ್ತರು ಮತ್ತು ನಿರ್ದೇಶಕರುಗಳಿಗೆ ಸೂಚಿಸಲಾಗಿದೆ.

ಸರ್ಕಾರಿ ಶಾಲೆಗಳ ರೀತಿಯಲ್ಲೇ ಸಾರ್ವಜನಿಕ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ: ಮಧು ಬಂಗಾರಪ್ಪ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


