MGNREGS: ಬಾಕಿ ಹಣ ಬಿಡುಗಡೆಗೆ ಕೇಂದ್ರ ಸಚಿವರಿಗೆ ಪ್ರಿಯಾಂಕ್ ಖರ್ಗೆ ಪತ್ರ!
ಲಕ್ಷಗಟ್ಟಲೆ ಗ್ರಾಮೀಣ ಕಾರ್ಮಿಕರ ಜೀವನೋಪಾಯದ ಭದ್ರತೆ ಖಾತ್ರಿ ಮಾತ್ರವಲ್ಲದೆ, ಆಡಳಿತಾತ್ಮಕ ದಕ್ಷತೆ ಮತ್ತು ಮಹತ್ವದ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ನಂಬಿಕೆ ಉಳಿಸಿಕೊಳ್ಳಲು ಸಮಯೋಚಿತ ಬಾಕಿ ವಿತರಣೆ ಅತ್ಯಗತ್ಯ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (MGNREGS) ಯೋಜನೆಯಡಿ ವೇತನ ಪಾವತಿಸಲು, ಸಾಮಾಗ್ರಿ ಖರೀದಿ ಮತ್ತಿತರ ವೆಚ್ಚ ಭರಿಸಲು ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.
ಲಕ್ಷಗಟ್ಟಲೆ ಗ್ರಾಮೀಣ ಕಾರ್ಮಿಕರ ಜೀವನೋಪಾಯದ ಭದ್ರತೆ ಖಾತ್ರಿ ಮಾತ್ರವಲ್ಲದೆ, ಆಡಳಿತಾತ್ಮಕ ದಕ್ಷತೆ ಮತ್ತು ಮಹತ್ವದ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ನಂಬಿಕೆ ಉಳಿಸಿಕೊಳ್ಳಲು ಸಮಯೋಚಿತ ಬಾಕಿ ವಿತರಣೆ ಅತ್ಯಗತ್ಯ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಯಾವುದೇ ಸಾಮಾಗ್ರಿ ನಿಧಿ ( material funds)ಬಿಡುಗಡೆ ಮಾಡಿಲ್ಲ. ಇದರಿಂದಾಗಿ ರೂ. 787.20 ಕೋಟಿ ಬಿಲ್ ಬಾಕಿ ಉಳಿದಿದೆ. ಹೆಚ್ಚುವರಿಯಾಗಿ, ಸುಮಾರು ರೂ. 600 ಕೋಟಿ ರೂ.ಗಳ ವೇತನ ಬಾಧ್ಯತೆಗಳು ಬಾಕಿ ಉಳಿದಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
MGNREGS ಯೋಜನೆಯಡಿ ಅನುದಾನ ಬಿಡುಗಡೆಯಲ್ಲಿ ನಿರಂತರ ವಿಳಂಬದ ಬಗ್ಗೆ ಕಳವಳ ವ್ಯಕ್ತಪಡಿಸಿದ ಖರ್ಗೆ, "ಗ್ರಾಮೀಣಾಭಿವೃದ್ಧಿ ಕಮಿಷನರೇಟ್ ಎಲ್ಲಾ ಅಗತ್ಯ ಪ್ರಮಾಣಪತ್ರಗಳು ಮತ್ತು ಪೂರಕ ದಾಖಲೆಗಳನ್ನು ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಸಲ್ಲಿಸಿದೆ ಎಂದು ತಿಳಿಸಿದ್ದಾರೆ
ಪ್ರಿಯಾಂಕ್ ಖರ್ಗೆ ಪ್ರಕಾರ, ಡಿಸೆಂಬರ್ 2024 ರಿಂದ ಕ್ಷೇತ್ರ ಮಟ್ಟದ ಸಿಬ್ಬಂದಿ ಮತ್ತು ಕಾರ್ಯನಿರ್ವಾಹಕರ ವೇತನವನ್ನು ಪಾವತಿಸಲಾಗಿಲ್ಲ. "ಈ ವಿಳಂಬವು ಕಾರ್ಯಾಚರಣೆ, ಮೇಲ್ವಿಚಾರಣೆ ಮತ್ತು ಯೋಜನೆಯ ಅನುಷ್ಠಾನದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



