ರಾಜ್ಯ

Soapಗೆ ಲಿಂಗಭೇದ ಇರುವುದಿಲ್ಲ; ರಾಯಭಾರಿಯಾಗಲು ನನಗೆ ಆಸಕ್ತಿಯಿಲ್ಲ, ಕನ್ನಡಿಗರನ್ನು ನೇಮಿಸಲಿ: ಯದುವೀರ್

ಅವರದ್ದೇ ಪಕ್ಷದ ನಟಿ ರಮ್ಯಾ ಅವರು ಇದಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಕನ್ನಡಿಗರನ್ನೇ ರಾಯಭಾರಿ ಮಾಡಿದ್ದರೇ ಬ್ರಾಂಡಿನ ಮೌಲ್ಯ ಇನ್ನೂ ಹೆಚ್ಚಾಗುತ್ತಿತ್ತು ಎಂದು ಹೇಳಿದ್ದಾರೆ.

Soapಗೆ ಲಿಂಗಭೇದ ಇರುವುದಿಲ್ಲ; ರಾಯಭಾರಿಯಾಗಲು ನನಗೆ ಆಸಕ್ತಿಯಿಲ್ಲ, ಕನ್ನಡಿಗರನ್ನು ನೇಮಿಸಲಿ: ಯದುವೀರ್
ಯದುವೀರ್ ಒಡೆಯರ್
Published On :

ಮೈಸೂರು: ಮೈಸೂರು ಸ್ಯಾಂಡಲ್‌ ಕನ್ನಡಿಗರೇ ಕಟ್ಟಿ ಬೆಳೆಸಿದ ಸಂಸ್ಥೆಯಾಗಿದ್ದು, ಅದಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆದ ಕನ್ನಡಿಗರನ್ನು ರಾಯಭಾರಿಯಾಗಿ ಮಾಡ ಬೇಕು. ತೆಲುಗು ನಟಿ ತಮನ್ನಾ ಬಾಟಿಯಾ ನೇಮಕಕ್ಕೆ ಸಂಸದ ಯದುವೀರ್‌ ಒಡೆಯರ್‌ ವಿರೋಧ ವ್ಯಕ್ತ ಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್‌, ಮೈಸೂರು ಸ್ಯಾಂಡಲ್‌ ಸೋಪ್‌ ರಾಯಭಾರತ್ವಕ್ಕೆ ನಟಿ ತಮನ್ನಾ ಭಾಟಿಯಾ ನೇಮಕ, ಒಂದು ಅರ್ಥದಲ್ಲಿ ಕನ್ನಡಿಗರಿಗೆ ಮಾಡಿದ ಅವಮಾನ. ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕನ್ನಡಿಗರು ಬಹಳಷ್ಟು ಜನ ಇದ್ದಾರೆ. ಅವರ್ಯಾರು ಸರ್ಕಾರದ ಕಣ್ಣಿಗೆ ಕಾಣಿಸಲಿಲ್ವ.

ಅವರದ್ದೇ ಪಕ್ಷದ ನಟಿ ರಮ್ಯಾ ಅವರು ಇದಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಕನ್ನಡಿಗರನ್ನೇ ರಾಯಭಾರಿ ಮಾಡಿದ್ದರೇ ಬ್ರಾಂಡಿನ ಮೌಲ್ಯ ಇನ್ನೂ ಹೆಚ್ಚಾಗುತ್ತಿತ್ತು ಎಂದು ಹೇಳಿದ್ದಾರೆ.

ಯದುವೀರ್‌ ಅವರನ್ನೇ ರಾಯಭಾರಿ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನಗೆ ವೈಯುಕ್ತಿಕವಾಗಿ ರಾಯಭಾರಿಯಾಗುವ ಆಸೆ ಯಿಲ್ಲ. ರಾಜಮನೆತನ ಕಮರ್ಷಿಯಲ್‌ ಆಗಿ ಸೇವೆ ಮಾಡುವುದಿಲ್ಲ. ನಾವು ಸದಾಕಾಲ ಕನ್ನಡದ ಬ್ರಾಂಡ್‌ಗಳ ಪರವಾಗಿಯೇ ಇರುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.