Belagavi: ಭಾರಿ ಮಳೆಗೆ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವು; Video
ಈ ದುರ್ಘಟನೆಯಲ್ಲಿ ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದರೆ, ಆಕೆಯ ತಾಯಿ ರೇಷ್ಮಾ ಮತ್ತು ಖುಷಿ ಗಾಯಗೊಂಡಿದ್ದಾರೆ.

ಬೆಳಗಾವಿ: ಕರ್ನಾಟಕದಲ್ಲಿ ಭಾರಿ ಮಳೆ ಆರಂಭವಾಗಿರುವಂತೆಯೇ ಅತ್ತ ಬೆಳಗಾವಿಯಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಭೀಕರ ಘಟನೆ ವರದಿಯಾಗಿದೆ.
ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಳನ್ನು ಕೃತಿಕಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ತಾಯಿ ರೇಷ್ಮಾ ಮತ್ತು ತಂಗಿ ಖುಷಿ ಗಾಯಗೊಂಡಿದ್ದಾರೆ. ಆದರೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಅವರನ್ನು ಗೋಕಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಬೆಳಿಗ್ಗೆ 7.30 ರ ಸುಮಾರಿಗೆ ಮಹಾಲಿಂಗೇಶ್ವರ ನಗರದಲ್ಲಿ ಈ ಘಟನೆ ಸಂಭವಿಸಿದೆ. ಕೃತಿಕಾ ಮತ್ತು ಆಕೆಯ ಸಹೋದರಿ ಖುಷಿ ಮಲಗಿದ್ದಾಗ, ಭಾರೀ ಮಳೆಯ ಸಮಯದಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ಅವರ ಮೇಲೆ ಬಿದ್ದಿದೆ.
ಈ ದುರ್ಘಟನೆಯಲ್ಲಿ ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದರೆ, ಆಕೆಯ ತಾಯಿ ರೇಷ್ಮಾ ಮತ್ತು ಖುಷಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


