ರಾಜ್ಯ

ವಿದ್ಯುತ್ ಸಂಪರ್ಕಕ್ಕೆ OC ಕಡ್ಡಾಯ: ಸಮಸ್ಯೆ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಧಾರ

ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಅನುಸರಿಸಿ ಆಕ್ಯುಪೆನ್ಸಿ ಸರ್ಟಿಫಿಕೇಟ್ ಪಡೆಯಬೇಕೆಂಬ ನಿಯಮವನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ವಿದ್ಯುತ್ ಸಂಪರ್ಕಕ್ಕೆ OC ಕಡ್ಡಾಯ: ಸಮಸ್ಯೆ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಧಾರ
ಕೆಜೆ ಜಾರ್ಜ್ — online desk
Published On :

ಬೆಂಗಳೂರು: ವಿದ್ಯುತ್ ಸಂಪರ್ಕ ಪಡೆಯಲು ಆಕ್ಯುಪೆನ್ಸಿ ಸರ್ಟಿಫಿಕೇಟ್ (OC) ಪಡೆಯಬೇಕೆಂಬ ಆದೇಶವನ್ನು ತೆಗೆದುಹಾಕುವ ಕುರಿತು ಮುಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ ಹೇಳಿದರು.

ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಅನುಸರಿಸಿ ಆಕ್ಯುಪೆನ್ಸಿ ಸರ್ಟಿಫಿಕೇಟ್ ಪಡೆಯಬೇಕೆಂಬ ನಿಯಮವನ್ನು ಸರ್ಕಾರ ಕಡ್ಡಾಯಗೊಳಿಸಿದೆ. ನಿಯಮದಿಂದ ಸಮಸ್ಯೆಗಳು ಎದುರಾಗಿದ್ದು, ಅದನ್ನು ಪರಿಹರಿಸಲು ಕಾನೂನು ತಿದ್ದುಪಡಿಯನ್ನು ಪರಿಗಣಿಸಲಾಗುತ್ತಿದೆ. ಈ ವಿಷಯವನ್ನು ಇತ್ತೀಚೆಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಲಾಯಿತು, ಅಲ್ಲಿ ಪರಿಹಾರ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ, ಅವರು ವರದಿ ಸಲ್ಲಿಸಿದ ಕೂಡಲೇ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಸಮಸ್ಯೆ ನಿವಾರಿಸಲಾಗುವುದು ಎಂದು ಹೇಳಿದರು.

ಗೃಹ ಜ್ಯೋತಿ ಯೋಜನೆಯಿಂದ ಸಾಕಷ್ಟು ಅನುಕೂಲವಾಗಿದೆಯಾದರೂ ಬಾಡಿಗೆ ಮನೆ ಬದಲಿಸುವಾಗ ಹಳೆಯ ಆರ್ ಆರ್ ನಂಬರ್​ಗೆ ಡಿ-ಲಿಂಕ್ ಮಾಡಿ ಹೊಸ ಆರ್ ಆರ್ ನಂಬರ್​ಗೆ ಲಿಂಕ್ ಮಾಡುವ ವೇಳೆ ಸಮಸ್ಯೆಯಾಗುತ್ತಿದೆ ಎಂಬ ಪಕ್ಷದ ಕಾರ್ಯಕರ್ತರ ಪ್ರಶ್ನೆಗೆ ಉತ್ತರಿಸಿ, ಆನ್​ಲೈನ್ ಮೂಲಕವೇ ಡಿ-ಲಿಂಕ್ ಮತ್ತು ಲಿಂಕ್ ವ್ಯವಸ್ಥೆ ಮಾಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಂದೊಮ್ಮೆ ನಿರ್ದಿಷ್ಟ ವ್ಯಕ್ತಿಗಳಿಗೆ ಸಮಸ್ಯೆ ಕಾಣಿಸಿಕೊಂಡರೆ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.