ಏಯ್ ಇವನನ್ನ ಆಚೆ ಕಳ್ಸಿ: ಸುದ್ದಿಗೋಷ್ಠಿ ವೇಳೆ ಮುಸ್ಲಿಂ ಮುಖಂಡನ ವಿರುದ್ಧ ಗುಂಡೂರಾವ್ ಗರಂ
ನಗರದಲ್ಲಿ ಪತ್ರಿಕಾಗೋಷ್ಠಿ ವೇಳೆ ಸಚಿವರು ಮಾತಾಡುವಾಗ ಮುಸ್ಲಿಂ ಮುಖಂಡನೊಬ್ಬ ಅವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದ್ದನು.

ಮಂಗಳೂರು: ಮಂಗಳೂರಿನಲ್ಲಿ ಪ್ರತೀಕಾರದ ಕೊಲೆಗಳ ಸರಣಿ ಮುಂದೂವರೆದಿದೆ. ಮಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದಾರೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ವೇಳೆ ಸಚಿವರು ಮಾತಾಡುವಾಗ ಮುಸ್ಲಿಂ ಮುಖಂಡನೊಬ್ಬ ಅವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದ್ದನು. ಇದರಿಂದ ಕೋಪಗೊಂಡ ಗುಂಡೂರಾವ್ ಮೊದಲಿಗೆ ಸುಮ್ಮನಿರುವಂತೆ ಗದುರಿದರು. ಇದಕ್ಕೆ ಸುಮ್ಮನಾಗದ ಆತ ಮಾತಾಡುವುದು ಮುಂದುವರಿಸಿದಾಗ ತಾಳ್ಮೆ ಕಳೆದುಕೊಳ್ಳುವ ದಿನೇಶ್ ಗುಂಡೂರಾವ್ ಆತನನ್ನು ಅಲ್ಲಿಂದ ಹೊರಗೆ ಹಾಕುವಂತೆ ಹೇಳುತ್ತಾರೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಯಿತು. ಈ ಘಟನೆಯಿಂದ ಕೆರಳಿದ ಮುಸ್ಲಿಂ ಮುಖಂಡರು ಕಾಂಗ್ರೆಸ್ ಗೆ ಸಾಮೂಹಿಕ ರಾಜಿನಾಮೆ ನೀಡಿದ್ದರು. ಇನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೀಶ್ ಪೂಜಾರಿ ಅವರ ಪುತ್ರ ದೀಪಕ್(21), ಪ್ರಮೋದ್ ರಾಜ್ ಜೋಗಿ ಅವರ ಪುತ್ರ ಪೃಥ್ವಿರಾಜ್(21) ಮತ್ತು ಸುರೇಶ್ ಬೆಲ್ಚಡ ಅವರ ಪುತ್ರ ಚಿಂತನ್(19) ಎಂಬುವರನ್ನು ಬಂಧಿಸಲಾಗಿದೆ.

ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಕೊಲೆ: ಮೂವರ ಬಂಧನ; ಸರಣಿ ಹತ್ಯೆ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸಾಮೂಹಿಕ ರಾಜೀನಾಮೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


