ವಿವಿಧ ಕ್ಷೇತ್ರಗಳ ಸಾಧಕರಿಗೆ 'ರಾಜ್ಯೋತ್ಸವ ಪ್ರಶಸ್ತಿ' ಪ್ರದಾನ; ಕನ್ನಡ ಪರ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್!
ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿದ್ದು, ಅವರ ನಿರ್ಧಾರದಂತೆ ಆಯ್ಕೆ ನಡೆದಿದೆ ಎಂದು ತಿಳಿಸಿದರು.

ಬೆಂಗಳೂರು: ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ "೭೦ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ೭೦ ಮಂದಿ ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯೋತ್ಸವ ಪ್ರಶಸ್ತಿ ನೀಡಿ, ಸನ್ಮಾನಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ, ಯಾರು ಯಾವ ಭಾಷೆಯಲ್ಲಿ ಮಾತನಾಡಿಸಿದರೂ ಕನ್ನಡದಲ್ಲೇ ಉತ್ತರ ಕೊಡುತ್ತೀವಿ ಎಂಬ ಸಂಕಲ್ಪ ಮಾಡೋಣ ಎಂದರು.
ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿದ್ದು, ಅವರ ನಿರ್ಧಾರದಂತೆ ಆಯ್ಕೆ ನಡೆದಿದೆ ಎಂದು ತಿಳಿಸಿದರು.
ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಶಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ, ನಿಮ್ಮ ಬದುಕು ಸಾರ್ಥಕವಾಗಲಿ ಎಂದು ಹಾರೈಸುತ್ತೇನೆ ಎಂದರು.
ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ. ಮಾಧ್ಯಮಗಳು ಯಾರ ಆಯ್ಕೆ ಬಗ್ಗೆಯೂ ತಕರಾರು ಮಾಡಿಲ್ಲ. ಆದ್ದರಿಂದ ಅರ್ಹರಿಗೇ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದು ಹೇಳಿದರು.
ಕನ್ನಡ ನಾಡು - ನುಡಿಯ ಬೆಳವಣಿಗೆಗೆ ಈ ಎಲ್ಲಾ ಸಾಧಕರ ಸೇವೆಗೆ ಈ ಮೂಲಕ ಗೌರವ ಸಲ್ಲಿಸಲಾಗಿದೆ. ಪ್ರಶಸ್ತಿ ಪುರಸ್ಕೃತರ ಜೀವನ ಸಾಧನೆ ಇತರರಿಗೆ ಮಾದರಿಯಾಗಲಿ. ಕನ್ನಡ ಭಾಷೆ ನಾಡಿನ ಮನೆ ಮನೆಗಳಲ್ಲಿ ನೆಲೆಸುವಂತಾಗಲಿ ಎಂದು ಹಾರೈಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



