ರಾಜ್ಯದ ಉರ್ದು ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹಮದ್ ಖಾನ್
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮನವಿಯಂತೆ ಮದರಸಗಳಲ್ಲಿ 90 ದಿನದಲ್ಲಿ ಕನ್ನಡ ಕಲಿಸುವ ಯೋಜನೆ ಆರಂಭವಾಗಿದೆ. ಉರ್ದು ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ, ಇಂಗ್ಲಿಷ್ ಭಾಷೆ ಕಲಿಸಲು ಆದೇಶಿಸಿದೆ’ ಎಂದರು.

ಹೊಸಪೇಟೆ: ರಾಜ್ಯದಲ್ಲಿ ಎಲ್ಲರೂ ಕನ್ನಡ ಕಲಿಯಬೇಕು ಎಂಬ ಉದ್ದೇಶದಿಂದ ಎಲ್ಲ ಮದರಸ ಮತ್ತು ಉರ್ದು ಶಾಲೆಗಳಲ್ಲಿ ಕನ್ನಡ ಕಲಿಕೆ ಆರಂಭಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮನವಿಯಂತೆ ಮದರಸಗಳಲ್ಲಿ 90 ದಿನದಲ್ಲಿ ಕನ್ನಡ ಕಲಿಸುವ ಯೋಜನೆ ಆರಂಭವಾಗಿದೆ. ಉರ್ದು ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ, ಇಂಗ್ಲಿಷ್ ಭಾಷೆ ಕಲಿಸಲು ಆದೇಶಿಸಿದೆ’ ಎಂದರು.
ಕರ್ನಾಟಕದಲ್ಲಿದ್ದು, ಕನ್ನಡ ಕಲಿಯದಿದ್ದರೆ ಇಷ್ಟು ವರ್ಷಗಳಿಂದ ಇಲ್ಲಿಯೇ ಇದ್ದರೂ ಉಪಯೋಗವಿಲ್ಲ. ಹಾಗಾಗಿ ಎಲ್ಲ ಮದರಸಾಗಳಲ್ಲಿಯೂ ಕನ್ನಡ ಕಲಿಸುವ ವ್ಯವಸ್ಥೆ ಮಾಡಲಾಗಿದೆ. ಸ್ವಾತಂತ್ರ‍್ಯ ಪೂರ್ವದಲ್ಲಿದ್ದ ಉರ್ದು ಶಾಲೆಗಳಲ್ಲಿ ಮೂರು ಭಾಷೆಗಳು ಕಡ್ಡಾಯ ಇದ್ದವು. ಅದೇ ರೀತಿ ಈಗ ಮೊದಲ ಭಾಷೆಯಾಗಿ ಕನ್ನಡ ತೆಗೆದುಕೊಳ್ಳಬೇಕು. ಎರಡನೇ ಭಾಷೆಯಾಗಿ ಉರ್ದು ಹಾಗೂ ಮೂರನೇ ಭಾಷೆಯಾಗಿ ಇಂಗ್ಲೀಷ್ ಭಾಷೆ ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದು ಹೇಳಿದರು.

ಕೇಂದ್ರ ಕನ್ನಡವನ್ನು ನಿರ್ಲಕ್ಷಿಸಿ ಹಿಂದಿ ಹೇರುತ್ತಿದೆ; ಆದ್ರೆ ರಾಜ್ಯದ ಮದರಸಗಳಲ್ಲೂ ಕನ್ನಡ ಕಲಿಸುತ್ತಿದ್ದೇವೆ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


