MES ಮುಖಂಡನ ಜೊತೆ ಸೆಲ್ಫಿ: ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಶೀಘ್ರದಲ್ಲೇ ಕ್ರಮ- ಗೃಹ ಸಚಿವ
ಅಧಿಕಾರಿ ಸೆಲ್ಫಿ ತೆಗೆದುಕೊಂಡ ಮಾತ್ರಕ್ಕೆ ಅವರು ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆಂದು ಭಾವಿಸಲಾಗುವುದಿಲ್ಲ. ಆದರೆ, ರಾಜ್ಯದ ಸಮಗ್ರತೆ ಮತ್ತು ತತ್ವಗಳಿಗೆ ವಿರುದ್ಧವಾಗಿ ವರ್ತಿಸುವ ಯಾವುದೇ ಅಧಿಕಾರಿ ಅಥವಾ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ತುಮಕೂರು: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಾಯಕರ ಜೊತೆ ಸೆಲ್ಫಿ ತೆಗೆದುಕೊಂಡ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಶನಿವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿ ಸೆಲ್ಫಿ ತೆಗೆದುಕೊಂಡ ಮಾತ್ರಕ್ಕೆ ಅವರು ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆಂದು ಭಾವಿಸಲಾಗುವುದಿಲ್ಲ. ಆದರೆ, ರಾಜ್ಯದ ಸಮಗ್ರತೆ ಮತ್ತು ತತ್ವಗಳಿಗೆ ವಿರುದ್ಧವಾಗಿ ವರ್ತಿಸುವ ಯಾವುದೇ ಅಧಿಕಾರಿ ಅಥವಾ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದ ನೀರು, ಭೂಮಿ ಮತ್ತು ಭಾಷೆಯನ್ನು ರಕ್ಷಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದೂ ಇದೇ ವೇಳೆ ತಿಳಿಸಿದರು.
ಏತನ್ಮಧ್ಯೆ ಅಧಿಕಾರಿಯ ವರ್ತನೆ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದ್ದು, ಕರ್ನಾಟಕ ರಾಜ್ಯೋತ್ಸವದ ದಿನವೇ ಕನ್ನಡ ಹಾಗೂ ಕರ್ನಾಟಕಕ್ಕೆ ಅವಮಾನಿಸಿದೆ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ. ಕರಾಳ ದಿನವನ್ನು ಆಚರಿಸುತ್ತಿದ್ದ ಬೆಳಗಾವಿಯ ನಾಡದ್ರೋಹಿ ಎಂಇಎಸ್ ಪುಂಡರೊಂದಿಗೆ ಕರ್ನಾಟಕದ ಪೊಲೀಸ್ ಸೆಲ್ಫಿ ತೆಗೆದುಕೊಂಡಿದ್ದಾರೆ. ಕರ್ನಾಟಕಕ್ಕೆ ಇದಕ್ಕಿಂತ ದೊಡ್ಡ ಅವಮಾನ ಇದೆಯೇ..?? ಗೊತ್ತಿಲ್ಲ ಅಲಿಯಾಸ್ “ಆಕಸ್ಮಿಕ” ಗೃಹ ಸಚಿವ ಪರಮೇಶ್ವರ್ ಅವರೆ, ಸೆಲ್ಫಿ ತೆಗೆದುಕೊಂಡ ನಾಡದ್ರೋಹಿ ಪೊಲೀಸ್ ವಿರುದ್ಧ ಕ್ರಮ ಯಾವಾಗ..?? ಎಂದು ಪ್ರಶ್ನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



