Bengaluru tunnel project: ಟ್ರಾಫಿಕ್ ಸಮಸ್ಯೆ ಹೋಗಲಾಡಿಸುವ ಯೋಜನೆಗೆ ವಿರೋಧವೇಕೆ? ಸಿಎಂ ಸಿದ್ದರಾಮಯ್ಯ
ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಸುರಂಗ ರಸ್ತೆ(Tunnel project) ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ, ಈ ಬಗ್ಗೆ ಉಪಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧ ಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ತಿಳಿಸಿದ್ದಾರೆ.
ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಟ್ರಾಫಿಕ್ ಸಮಸ್ಯೆಯನ್ನು ಹೋಗಲಾಡಿಸುವ ಈ ಯೋಜನೆಗೆ ವಿರೋಧ ಏಕೆ ವ್ಯಕ್ತವಾಗಬೇಕು? ಇದೇ ರೀತಿಯ ಟನಲ್ ಯೋಜನೆಗಳನ್ನು ಅನೇಕ ದೇಶದಲ್ಲಿಯೂ ಕೈಗೊಳ್ಳಲಾಗಿದೆ. ಅಲ್ಲಿನ ಜನರು ಇದನ್ನು ವಿರೋಧಿಸಿಲ್ಲ ಎಂದು ಹೇಳಿದ್ದಾರೆ.
ಟನಲ್ ಯೋಜನೆಯನ್ನು ಕಾರು, ಬಸ್, ದ್ವಿಚಕ್ರ ವಾಹನ ಸವಾರರು ಹೀಗೆ ಎಲ್ಲ ವರ್ಗದ ಜನರಿಗೆ ಅನುಕೂಲವಾಗಲೆಂದು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



