ಬಾಗಲಕೋಟೆ: ಹುಚ್ಚು ನಾಯಿ ಕಡಿತ; ಮಕ್ಕಳು, ವೃದ್ಧರು ಸೇರಿದಂತೆ 10 ಕ್ಕೂ ಹೆಚ್ಚು ಮಂದಿಗೆ ಗಾಯ!
ಹುಚ್ಚು ನಾಯಿ ಕಡಿತದಿಂದ ಹಲವು ಮಕ್ಕಳ ಮುಖ, ತುಟಿ ಮತ್ತು ಕೆನ್ನೆಗಳಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಳಕಲ್: ಹುಚ್ಚು ನಾಯಿ ಕಡಿತದಿಂದ ಚಿಕ್ಕ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆದಿದೆ.
ಗೋಲೆರಗುಡಿ, ಜೂನಿಯರ್ ಕಾಲೇಜು ರಸ್ತೆ, ಶರಣಬಸವೇಶ್ವರ ದೇವಸ್ಥಾನ ಸೇರಿದಂತೆ ಹಲವು ಕಡೆಗಳಲ್ಲಿ ಈ ದಾಳಿ ನಡೆದಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ.
ಹುಚ್ಚು ನಾಯಿ ಕಡಿತದಿಂದ ಹಲವು ಮಕ್ಕಳ ಮುಖ, ತುಟಿ ಮತ್ತು ಕೆನ್ನೆಗಳಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕಾರಿಗಳು ಹುಚ್ಚು ನಾಯಿ ಪತ್ತೆಹಚ್ಚಲು ಮತ್ತು ಸೆರೆಹಿಡಿಯಲು ಪ್ರಯತ್ನಿಸುತ್ತಿದ್ದಾರೆ.
ದಾವಣಗೆರೆಯಲ್ಲಿ ಇತ್ತೀಚಿಗೆ ನಡೆದಿದ್ದ ಮತ್ತೊಂದು ಘಟನೆಯಲ್ಲಿ ಬೀದಿ ನಾಯಿ ದಾಳಿಯ ನಂತರ ನಾಲ್ಕು ತಿಂಗಳಿನಿಂದ ಜೀವನ್ಮರಣದಲ್ಲಿ ಹೋರಾಡುತ್ತಿದ್ದ ನಾಲ್ಕು ವರ್ಷದ ಬಾಲಕಿ ಖಾದಿರಾ ಭಾನು ಆಗಸ್ಟ್‌ನಲ್ಲಿ ಸಾವನ್ನಪ್ಪಿದಳು.
ಬೆಂಗಳೂರು ವಿಶ್ವವಿದ್ಯಾಲಯದ ಕೆಂಗೇರಿ ಕ್ಯಾಂಪಸ್‌ನೊಳಗೆ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದರಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ರಾಜ್ಯದಲ್ಲಿ ಈ ವರ್ಷದ ಜನವರಿಯಿಂದ ಆಗಸ್ಟ್ ರ ನಡುವೆ 2.86 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು ರೇಬೀಸ್‌ನಿಂದ 26 ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



