ರಾಜ್ಯ

ಬೆಳಗಾವಿಯಲ್ಲಿ ರೈತರ ಪ್ರತಿಭಟನೆ: ಆದಷ್ಟು ಬೇಗ ಕಬ್ಬಿಗೆ ಬೆಲೆ ನಿಗದಿ; ಸಚಿವ ಪರಮೇಶ್ವರ್

ಬೆಳಗಾವಿ ಪ್ರತಿಭಟನೆ ಕುರಿತು ಸಚಿವ ಶಿವಾನಂದ ಪಾಟೀಲ್ ಜೊತೆ ಚರ್ಚೆ ನಡೆಸಲಾಗಿದ್ದು, ಆದಷ್ಟು ಬೇಗ ಕಬ್ಬಿಗೆ ಬೆಲೆ ನಿಗದಿ ಮಾಡಿ ಸಮಸ್ಯೆ ಬಗೆಹರಿಸುವಂತೆ ತಿಳಿಸಲಾಗಿದೆ. ಇಲ್ಲದಿದ್ರೆ ಪೊಲೀಸರಿಗೆ ಪರಿಸ್ಥಿತಿ ನಿಭಾಯಿಸುವುದು ಕಷ್ಟ ಆಗುತ್ತದೆ.

ಬೆಳಗಾವಿಯಲ್ಲಿ ರೈತರ ಪ್ರತಿಭಟನೆ: ಆದಷ್ಟು ಬೇಗ ಕಬ್ಬಿಗೆ ಬೆಲೆ ನಿಗದಿ; ಸಚಿವ ಪರಮೇಶ್ವರ್
ಗೃಹ ಸಚಿವ ಜಿ ಪರಮೇಶ್ವರ್
Published On :

ಬೆಂಗಳೂರು: ಸಾಧ್ಯವಾದಷ್ಟು ಬೇಗ ಕಬ್ಬಿನ ಬೆಲೆಯನ್ನು ನಿಗದಿಪಡಿಸಿ ಸಮಸ್ಯೆಯನ್ನು ಪರಿಹರಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಪ್ರತಿಭಟನೆ ಕುರಿತು ಸಚಿವ ಶಿವಾನಂದ ಪಾಟೀಲ್ ಜೊತೆ ಚರ್ಚೆ ನಡೆಸಲಾಗಿದ್ದು, ಆದಷ್ಟು ಬೇಗ ಕಬ್ಬಿಗೆ ಬೆಲೆ ನಿಗದಿ ಮಾಡಿ ಸಮಸ್ಯೆ ಬಗೆಹರಿಸುವಂತೆ ತಿಳಿಸಲಾಗಿದೆ. ಇಲ್ಲದಿದ್ರೆ ಪೊಲೀಸರಿಗೆ ಪರಿಸ್ಥಿತಿ ನಿಭಾಯಿಸುವುದು ಕಷ್ಟ ಆಗುತ್ತದೆ ಎಂದು ತಿಳಿಸಿದ್ದೇನೆಂದು ಹೇಳಿದರು.

ಸತೀಶ್ ಜಾರಕಿಹೊಳಿ ಸೇರಿ ಆ ಭಾಗದ ಸಚಿವರು ಸಮಸ್ಯೆ ಬಗೆಹರಿಸುವ ಭರವಸೆ ಕೊಟ್ಟಿದ್ದಾರೆ. ನಿನ್ನೆ ಒಬ್ಬರು ರೈತರು ಆತ್ಮಹತ್ಯೆ ಪ್ರಯತ್ನ ಮಾಡಿದ್ದರು. ಪೊಲೀಸರು ಅವರನ್ನು ರಕ್ಷಣೆ ಮಾಡಿದ್ದಾರೆ. ಈ ರೀತಿಯ ಘಟನೆಗಳು ಮರುಕಳಿಸಬಾರದು. ಬಿಜೆಪಿಯವರು ಸಹಜವಾಗಿ ಇಂತಹ ಸಂದರ್ಭದಲ್ಲಿ ಬೆಂಬಲ ಕೊಟ್ಟಿದ್ದಾರೆ. ಇಂತಹ ಅವಕಾಶ ಮತ್ತೆ ಸಿಕ್ಕರೆ ಬಿಡುತ್ತಾರಾ? ಸರ್ಕಾರ ಕುರ್ಚಿ ಕಚ್ಚಾಟದಲ್ಲಿ ತೊಡಗಿದೆ ಎಂದು ಬಿಜೆಪಿಯವರು ಆರೋಪಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಏನಾಗಿತ್ತು ಎಂದು ಅವರೇ ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಸಚಿವ ಸಂಪುಟ ಪುನಾರಚನೆ ಕುರಿತು ಮಾತನಾಡಿ, ಈ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವೆಲ್ಲರೂ ಹೈಕಮಾಂಡ್ ನಿರ್ಧಾರಗಳನ್ನು ಗೌರವಿಸುತ್ತೇವೆ ಮತ್ತು ಅನುಸರಿಸುತ್ತೇವೆ. ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಸರಿ. ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ ಅದನ್ನು ನಾವು ಕೇಳುತ್ತೇವೆಂದು ತಿಳಿಸಿದರು.

ವರ್ತೂರು ಪೊಲೀಸ್ ಅಧಿಕಾರಿಯೊಬ್ಬರು ಮನೆಕೆಲಸದವಳ ಮೇಲೆ ನಡೆಸಿದ ಹಲ್ಲೆಯ ಘಟನೆಯ ಕುರಿತು ಮಾತನಾಡಿ, ಇದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸ್ ಆಯುಕ್ತರಿಂದ ವರದಿ ಕೇಳಿದ್ದೇನೆ. ವರದಿ ಬಂದ ನಂತರ, ಪರಿಶೀಲಿಸಿ, ಅಗತ್ಯವಿದ್ದರೆ ಪೊಲೀಸ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.