ರಾಜ್ಯ

ಕಬ್ಬು ಬೆಳೆಗಾರರು- ಕಾರ್ಖಾನೆ ಮಾಲೀಕರಿಗೆ ಅನ್ಯಾಯ ಆಗದಂತೆ ಸೂಕ್ತ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

ರೈತರು ಮತ್ತು ಕಾರ್ಖಾನೆ ಮಾಲೀಕರ ಜಂಟಿ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು. ಆದಾಗ್ಯೂ, ಬೆಲೆ ಮಾತುಕತೆಗಳನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕು. ಕಾರ್ಖಾನೆ ಮಾಲೀಕರು, ರೈತರು ಸೇರಿ ಸಭೆ ಮಾಡುತ್ತೇವೆ.

ಕಬ್ಬು ಬೆಳೆಗಾರರು- ಕಾರ್ಖಾನೆ ಮಾಲೀಕರಿಗೆ ಅನ್ಯಾಯ ಆಗದಂತೆ ಸೂಕ್ತ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Published On :

ಬೆಳಗಾವಿ: ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಪ್ರತಿಭಟನೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದ ಸಚಿವರು,‌ ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದೆ. ನಾನು ಬ್ಯೂಸಿ ಇದ್ದ ಕಾರಣ ಮೀಟಿಂಗ್‌ನಲ್ಲಿ ಇರಲಿಲ್ಲ. ನನ್ನ ತಮ್ಮ ಹಾಗೂ ಮಗ ರೈತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

ರೈತರು ಮತ್ತು ಕಾರ್ಖಾನೆ ಮಾಲೀಕರ ಜಂಟಿ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು. ಆದಾಗ್ಯೂ, ಬೆಲೆ ಮಾತುಕತೆಗಳನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕು. ಕಾರ್ಖಾನೆ ಮಾಲೀಕರು, ರೈತರು ಸೇರಿ ಸಭೆ ಮಾಡುತ್ತೇವೆ. ದರದ ಬಗ್ಗೆ ಮಾತನಾಡಲು ಹೋದರೆ ಬೇರೆ ರೀತಿ ಆಗುತ್ತೆ. ರೈತರಿಗೆ ದಕ್ಕೆಯಾಗದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ‌ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ರೈತರ ಪ್ರತಿಭಟನೆಯಲ್ಲಿ ‌ಬಿಜೆಪಿ ನಾಯಕರು ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ರೈತರ ಹೋರಾಟದಲ್ಲಿ ಎಲ್ಲರೂ ಭಾಗಿಯಾಗಲಿ, ರಾಜಕೀಯ ಬಿಟ್ಟು ಪ್ರತಿಭಟನೆಗೆ ಹೋಗಲಿ. ರೈತರ ಬಗೆಗಿನ ಬಿಜೆಪಿ ಹೋರಾಟ ನಮಗೂ ಗೊತ್ತಿದೆ, ನಿಮಗೂ ಗೊತ್ತಿದೆ ಎಂದರು.

ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ಹೇಗೆಲ್ಲಾ ಹತ್ತಿಕ್ಕಿತು. ಈ ಹೋರಾಟದಲ್ಲಿ ಎಷ್ಟು ಜನ ರೈತರು ತೀರಿಕೊಂಡರು ಎನ್ನುವುದು ಗೊತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇರಲಿ.‌ ಸದ್ಯಕ್ಕೆ ನಾನು ಈ ಬಗ್ಗೆ ಏನೂ ಮಾತನಾಡಲ್ಲ ಎಂದು‌ ಹೇಳಿದರು.

ರೈತರ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರು ಸೇರುತ್ತಿರುವ ಬಗ್ಗೆ ಅವರು, "ಎಲ್ಲರೂ ರೈತರ ಹೋರಾಟದಲ್ಲಿ ಸೇರಲಿ, ಆದರೆ ಅವರು ರಾಜಕೀಯವನ್ನು ಬದಿಗಿಡಬೇಕು. ರೈತರ ಬಗ್ಗೆ ಬಿಜೆಪಿಯ ಕಾಳಜಿ ನಮಗೆಲ್ಲರಿಗೂ ತಿಳಿದಿದೆ" ಎಂದು ಹೇಳಿದರು.

ನವೆಂಬರ್ 19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಆಹ್ವಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಹುಲ್ ಗಾಂಧಿ ಅವರ ಬಳಿ‌ ನವೆಂಬರ್ 19 ಮತ್ತು 20ಕ್ಕೆ ಸಮಯ ಕೊಡಿ ಅಂತ ಕೇಳಿದ್ದೇವೆ. ಬೆಂಗಳೂರಿನಲ್ಲಿ ಟೆಕ್‌ ಶೃಂಗ ಸಭೆ ನಡೆಯಲಿದ್ದು, ಸಮಯ ಹೊಂದಿಸಿಕೊಂಡು ಹೇಳುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.