ರೈತರ ಆಕ್ರೋಶದ ಕಿಚ್ಚು: ಸಚಿವ ಶಿವಾನಂದ ಪಾಟೀಲ್ ಕಾರ್ ಮೇಲೆ ಚಪ್ಪಲಿ, ನೀರಿನ ಬಾಟಲ್ ಎಸೆದು ಆಕ್ರೋಶ!
ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ 8 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗಾವಿ: ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ 8 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ರೈತರನ್ನು ಮನವೊಲಿಸಲು ಆಗಮಿಸಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರ ಕಾರ್ ಮೇಲೆ ಚಪ್ಪಲಿ, ನೀರಿನ ಬಾಟಲ್ ಎಸೆದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಪ್ರತಿ ಟನ್ ಕಬ್ಬಿಗೆ 3500 ರೂ. ನೀಡಬೇಕೆಂದು ಆಗ್ರಹಿಸಿ ರೈತರ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವ ಶಿವಾನಂದ ಪಾಟೀಲ್ ರೈತರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಎರಡು ದಿನ ಸಮಯಾವಕಾಶ ಕೊಡಿ ಎಂದು ಹೇಳಿದ್ದಾರೆ. ಈ ವೇಳೆ ರೈತ ಮುಖಂಡರು ನಾಳೆ 7 ಗಂಟೆವರೆಗೆ ಡೆಡ್ ಲೈನ್ ನೀಡಿದ್ದು ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ. ನಮ್ಮ ಬೇಡಿಕೆಗಳು ಈಡೇರಿದರೆ ಮಾತ್ರ ನಾವು ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ. ಅಲ್ಲಿಯವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ರೈತ ಮುಖಂಡರು ಹೇಳಿದ್ದಾರೆ. ಇನ್ನು ಸಚಿವರು ಯಾವುದೇ ಭರವಸೆ ನೀಡದೆ ತೆರಳಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಸಚಿವರ ಕಾರ್ ಗೆ ಮುತ್ತಿಗೆ ಹಾಕಲು ಮುಂದಾಗಿದ್ದು ಅವರ ಕಾರಿನ ಮೇಲೆ ಚಪ್ಪಲಿ, ನೀರಿನ ಬಾಟಲ್ ಎಸೆದು ಆಕ್ರೋಶ ಹೊರಹಾಕಿದ್ದಾರೆ.

ಕಹಿಯಾದ ಕಬ್ಬು: ರೈತರ ಪ್ರತಿಭಟನೆಯಿಂದ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಸ್ತಬ್ಧ; ಇಕ್ಕಟ್ಟಿನಲ್ಲಿ ಸರ್ಕಾರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


