ಕಬ್ಬು ಬೆಳೆಗಾರರ ಹೋರಾಟ 8ನೇ ದಿನಕ್ಕೆ: ಸರ್ಕಾರಕ್ಕೆ ಡೆಡ್ ಲೈನ್; ಸಚಿವ ಪಾಟೀಲ್ ಸಂಧಾನ ಸಭೆ ವಿಫಲ; Video
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು 8 ನೇ ದಿನಕ್ಕೆ ಕಾಲಿಟ್ಟಿದೆ.

ಬೆಳಗಾವಿ: ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂದು 8ನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು 8 ನೇ ದಿನಕ್ಕೆ ಕಾಲಿಟ್ಟಿದೆ.
ಬೆಳಗಾವಿ ಜಿಲ್ಲೆಯ ಅಥಣಿ, ರಾಯಬಾಗ, ಬೆಳಗಾವಿ ಸೇರಿದಂತೆ ಎಲ್ಲಾ ಕಡೆಯೂ ಹೋರಾಟ ನಡೆಯುತ್ತಿದೆ. ರೈತರ ಕಿಚ್ಚು ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಸರ್ಕಾರ, ಹಿರಿಯ ಸಚಿವ ಹೆಚ್.ಕೆ ಪಾಟೀಲ್ರನ್ನು ನಿನ್ನೆ ಸಂಧಾನಕ್ಕೆ ಕಳುಹಿಸಿದ್ದು ಮಾತುಕತೆ ವಿಫಲವಾಗಿದೆ.
ಸಂಧಾನ ವಿಫಲ ಆಗುತ್ತಿದ್ದಂತೆಯೇ ಸಚಿವರು ಕಾರು ಹತ್ತಿ ವಾಪಸ್ ಆಗುತ್ತಿದ್ದಾಗ ಅವರ ಕಾರಿನ ಮುಂದೆ ಮಲಗಿ, ಕಾರಿಗೆ ಗುದ್ದಿ ರೈತರು ಆಕ್ರೋಶ ಹೊರಹಾಕಿದ್ದಾರೆ. ಬೇಕೇ ಬೇಕು ನ್ಯಾಯ ಬೇಕು ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಸಚಿವರ ಕಾರಿಗೆ ಮುತ್ತಿಗೆ ಹಾಕಿದ ರೈತರನ್ನು ಪೊಲೀಸರು ಎಳೆದು ಹಾಕುತ್ತಿದ್ದಂತೆಯೇ ತಳ್ಳಾಟ, ನೂಕಾಟವಾಯಿತು.
ಸಿಎಂ ಜತೆ ಮಾತುಕತೆಗೆ ರೈತರ ನಕಾರ: ಇಂದು ಹೆದ್ದಾರಿ ಬಂದ್
ನಿನ್ನೆ ರೈತರ ಜೊತೆ ಸಂಧಾನಕ್ಕೆ ಬಂದಿದ್ದ ಸಚಿವ ಪಾಟೀಲ್, ಸಿಎಂ ಅವರ ಬಳಿ ರೈತರ ನಿಯೋಗ ಕರೆದುಕೊಂಡು ಬನ್ನಿ ಎಂದು ಮನವಿ ಮಾಡಿದ್ದರು. ಆದರೆ, ನೀವು 3,500 ರೂ. ಬೆಲೆ ನಿಗದಿ ಘೋಷಣೆಯ ನಿರ್ಧಾರ ಮಾಡಿ. ಇಂದು ಸಂಜೆ 7 ಗಂಟೆಯೊಳಗೆ ನಿರ್ಧಾರ ಮಾಡಿ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸಂಧಾನಕ್ಕೆ ಬಂದಿದ್ದ ಹೆಚ್ಕೆ ಪಾಟೀಲ್ ವಾಪಸ್ ಆಗಿದ್ದಾರೆ.
ಇಂದಿನಿಂದ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ರೈತರು, ನಾಳೆಯಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ.
ಕಬ್ಬು ಬೆಳೆಗಾರರ ಬೇಡಿಕೆ
ಪ್ರತಿ ಟನ್ ಕಬ್ಬಿಗೆ 3,500 ರೂ. ನಿಗದಿಪಡಿಸಿ ಆದೇಶ ಹೊರಡಿಸಬೇಕು.
ಕಬ್ಬಿನ ತೆರಿಗೆ ಹಣದಲ್ಲಿ ರೈತರಿಗೆ 1 ಸಾವಿರ ರೂ. ನೀಡಬೇಕು.
ಕಬ್ಬಿನ ತೂಕದಲ್ಲಿ ಮೋಸ ಮಾಡುತ್ತಿರುವುದು ಬಂದ್ ಆಗಬೇಕು.
ಸರ್ಕಾರವೇ ಸಕ್ಕರೆ ಕಾರ್ಖಾನೆ ಬಳಿ ತೂಕದ ಮೆಷಿನ್ ಇಡಬೇಕು.
ತೂಕ ಸೇರಿ ಪ್ರತಿಯೊಂದು ಮಾಹಿತಿ ಡಿಜಿಟಲೀಕರಣ ಮಾಡಬೇಕು.
ಸಕ್ಕರೆ ಆಯುಕ್ತರ ಕಚೇರಿಗೆ 100 ಸಿಬ್ಬಂದಿ ನೇಮಕ ಮಾಡಬೇಕು.
ಇಂದು ಸಚಿವ ಸಂಪುಟ ಸಭೆ
ಇದೆಲ್ಲದರ ನಡುವೆ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದೇ ಸಭೆಯಲ್ಲಿ ಸರ್ಕಾರ ಬೆಲೆ ನಿಗದಿ ಮಾಡುವ ಸಾಧ್ಯತೆ ಇದೆ. ಇಂದು ಸಂಜೆಯೊಳಗೆ ಸರ್ಕಾರ ರೈತರ ಬೇಡಿಕೆಗೆ ಒಪ್ಪಿಕೊಳ್ಳದಿದ್ದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



