ರಾಜ್ಯ

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ RSS ಮುಖ್ಯಸ್ಥ ಮೋಹನ್‌ ಭಾಗವತ್‌ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ರಾಷ್ಟೀಯ ಸ್ವಯಂಸೇವಕ ಸಂಘವು (RSS) ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ.

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ RSS ಮುಖ್ಯಸ್ಥ ಮೋಹನ್‌ ಭಾಗವತ್‌ ಭೇಟಿ: ವಿಶೇಷ ಪೂಜೆ ಸಲ್ಲಿಕೆ
ಮೋಹನ್ ಭಾಗವತ್
Published On :

ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶುಕ್ರವಾರ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಷ್ಟೀಯ ಸ್ವಯಂಸೇವಕ ಸಂಘವು (RSS) ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ.

ಶತಾಬ್ದಿ ವರ್ಷದಲ್ಲಿ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ಮನೆಮನೆ ಸಂಪರ್ಕ, ಹಿಂದೂ ಸಮ್ಮೇಳನ, ಸಾಮಾಜಿಕ ಸದ್ಭಾವನಾ ಸಮಾವೇಶ, ಪ್ರಮುಖ ನಾಗರಿಕರ ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಹಮ್ಮಿಕೊಳ್ಳುತ್ತಾ ಬರುತ್ತಿದೆ.

ಇದರ ಮುಂದುವರಿದ ಹಾದಿಯಾಗಿ ನಗರದಲ್ಲಿ ನವೆಂಬರ್‌ 8 ಮತ್ತು 9ರಂದು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಡಾ.ಮೋಹನ್ ಭಾಗವತ್ ಅವರು ಮಾತನಾಡಲಿದ್ದಾರೆ. ಇದರಂತೆ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.