ಬೆಂಗಳೂರು ಕಾರಾಗೃಹವೋ ಐಷಾರಾಮಿ ಕೇಂದ್ರವೋ?: ವಿಕೃತಕಾಮಿ ಉಮೇಶ್ ರೆಡ್ಡಿ, ISIS ಉಗ್ರನಿಗೆ ಟಿವಿ, ಮೊಬೈಲ್ ರಾಜಾತಿಥ್ಯ! Video
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ವಿಐಪಿ ಸೌಲಭ್ಯಗಳು ಮತ್ತು ಸ್ಮಾರ್ಟ್ ಫೋನ್ಗಳು ದೊರೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ತೀವ್ರ ಕಳಕಳಿ ಹುಟ್ಟುಹಾಕುತ್ತಿದೆ.

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ವಿಐಪಿ ಸೌಲಭ್ಯಗಳು ಮತ್ತು ಸ್ಮಾರ್ಟ್ ಫೋನ್ಗಳು ದೊರೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ತೀವ್ರ ಕಳಕಳಿ ಹುಟ್ಟುಹಾಕುತ್ತಿದೆ. ವಿಕೃತಕಾಮಿ ಉಮೇಶ್ ರೆಡ್ಡಿ ಮೊಬೈಲ್ ಬಳಸುತ್ತಾ ಸ್ಮಾರ್ಟ್ ಟಿವಿ ನೋಡುತ್ತಿರುವ ವಿಡಿಯೋ ಹಾಗೂ ಲಷ್ಕರ್ ಉಗ್ರ ಮೊಬೈಲ್ ಬಳಸುತ್ತಿರುವ ವಿಡಿಯೋಗಳು ವೈರಲ್ ಆಗಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ನಟ ದರ್ಶನ್ ಪ್ರಕರಣದ ಬೆನ್ನಲ್ಲೇ ಯಾವುದೇ ಸೌಲಭ್ಯಗಳನ್ನು ನೀಡದಂತೆ ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರ ಕಾರಾಗೃಹದ ಮುಖ್ಯಸ್ಥರಿಗೆ ಸುಪ್ರೀಂ ಕೋರ್ಟ್ ಕಠಿಣ ನಿಲುವು ತೆಗೆದುಕೊಂಡಿದ್ದರೂ, ಹಲವು ಜೈಲುಗಳಲ್ಲಿ ಇಂತಹ ವಿಐಪಿ ಸೌಲಭ್ಯಗಳು ಮುಂದುವರೆದಿದೆ. ಆಘಾತಕಾರಿ ವಿಷಯವೆಂದರೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಸಿಸ್ನ ಮೋಸ್ಟ್ ವಾಂಟೆಡ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಎಂಬಾತನಿಗೂ ರಾಜಾತಿಥ್ಯ ದೊರೆಯುತ್ತಿರುವುದು ಬಯಲಾಗಿದೆ. ಪರಪ್ಪನ ಅಗ್ರಹಾರ ಜೈಲು ಭಯೋತ್ಪಾದಕರ ಸ್ವರ್ಗವಾಗಿ ಪರಿಣಮಿಸಿದೆಯೇ ಎಂಬ ಅನುಮಾನವೂ ಹುಟ್ಟಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



