ರಾಜ್ಯ

ಪವಿತ್ರಾ ಗೌಡಗೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಹಿನ್ನಡೆ: ಕಾರಣವೇನು?

ತನ್ನ ಮಗಳು ಮತ್ತು ಪೋಷಕರ ಪೋಷಣೆಗಾಗಿ ಜಾಮೀನು ಕೋರಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಪವಿತ್ರಾ ಗೌಡಗೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಹಿನ್ನಡೆ: ಕಾರಣವೇನು?
ಪವಿತ್ರಾ ಗೌಡ
Published On :

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ತನ್ನ ಮಗಳು ಮತ್ತು ಪೋಷಕರ ಪೋಷಣೆಗಾಗಿ ಜಾಮೀನು ಕೋರಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಅಲ್ಲದೇ ಅರ್ಜಿ ವಿಚಾರಣೆ ವೇಳೆ ನಾವು ಆದೇಶ ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಮತ್ತೊಮ್ಮೆ ಪರಿಶೀಲನೆ ನಡೆಸಿ ಆದೇಶ ಮಾಡುವ ಅಗತ್ಯವಿಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಆದೇಶ ಪರಿಶೀಲನೆ ಕೋರಿ ಸುಪ್ರೀಂ ಕೋರ್ಟ್ ಗೆ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ ಅವರು ಮತ್ತೆ ಜೈಲು ಸೇರಿದ್ದಾರೆ. ಅವರು ಎ1 ಆರೋಪಿ ಆದರೆ, ನಟ ದರ್ಶನ್ ಎ2 ಆರೋಪಿ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.