'ಕೈ' ಕಾರ್ಯಕರ್ತರಿಗೆ ಗುಡ್ ನ್ಯೂಸ್: ಒಂದು ವಾರದಲ್ಲಿ ನಿಗಮ-ಮಂಡಳಿಗಳಿಗೆ ನಿರ್ದೇಶಕರ ನೇಮಕ..!
ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ದೇಶಕರನ್ನಾಗಿ ನೇಮಕ ಮಾಡುವ ಕಾರ್ಯವನ್ನು ಒಂದು ವಾರದೊಳಗೆ ಮಾಡಲಾಗುವುದು.

ಬೆಂಗಳೂರು: ರಾಜ್ಯ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಚರ್ಚೆಗಳ ನಡುವಲ್ಲೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನಿಗಮ ಮಂಡಳಿ ಸದಸ್ಯರ ನೇಮಕದ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿರುವ ಅವರು, ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ದೇಶಕರನ್ನಾಗಿ ನೇಮಕ ಮಾಡುವ ಕಾರ್ಯವನ್ನು ಒಂದು ವಾರದೊಳಗೆ ಮಾಡಲಾಗುವುದು ಎಂದು ಹೇಳಿದರು.
ಈಗಾಗಲೇ 3 ಸಾವಿರ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 15 ಜನರಿಗೆ ಗ್ಯಾರಂಟಿ ಸಮಿತಿ ಜವಾಬ್ದಾರಿ ನೀಡಿದ್ದೇವೆ. ಪ್ರತಿ ಕ್ಷೇತ್ರಗಳಲ್ಲಿ 60 ಜನರನ್ನು ನಾಮನಿರ್ದೇಶನ ಮಾಡಿದ್ದೇವೆ. ರಾಜ್ಯ ಮಟ್ಟದಲ್ಲಿ ನಿಗಮ ಮಂಡಳಿಗಳಲ್ಲಿ 600 ಸ್ಥಾನಗಳಿವೆ. ಇವುಗಳನ್ನು ಇನ್ನೊಂದು ವಾರದಲ್ಲಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



