ರಾಜ್ಯ

ಬೆಂಗಳೂರು: ಮದುವೆಯಾದ 8 ತಿಂಗಳಿಗೆ ಬ್ಯಾಂಕ್ ಉದ್ಯೋಗಿ ಗಗನ್ ರಾವ್ ಆತ್ಮಹತ್ಯೆಗೆ ಶರಣು

ದಾಂಪತ್ಯ ಕಲಹಕ್ಕೆ ಜೀವಗಳು ಬಲಿಯಾಗುತ್ತಿರುವ ಪ್ರಕರಣಗಳು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚಾಗುತ್ತಿದೆ. ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.

ಬೆಂಗಳೂರು: ಮದುವೆಯಾದ 8 ತಿಂಗಳಿಗೆ ಬ್ಯಾಂಕ್ ಉದ್ಯೋಗಿ ಗಗನ್ ರಾವ್ ಆತ್ಮಹತ್ಯೆಗೆ ಶರಣು
ಆತ್ಮಹತ್ಯೆಗೆ ಶರಣಾದ ಗಗನ್ ರಾವ್
Published On :

ಬೆಂಗಳೂರು: ದಾಂಪತ್ಯ ಕಲಹಕ್ಕೆ ಜೀವಗಳು ಬಲಿಯಾಗುತ್ತಿರುವ ಪ್ರಕರಣಗಳು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚಾಗುತ್ತಿದೆ. ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಮೃತನನ್ನು ಬ್ಯಾಂಕ್ ಉದ್ಯೋಗಿ ಗಗನ್ ರಾವ್ ಎಂದು ಗುರುತಿಸಲಾಗಿದೆ. ಎಂಟು ತಿಂಗಳ ಹಿಂದೆ ಮೇಘನಾ ಜತೆ ಗಗನ್ ರಾವ್ ಮದುವೆಯಾಗಿದ್ದರು. ಮದುವೆಯಾದಾಗಿನಿಂದ ದಂಪತಿ ನಡುವೆ ನಿತ್ಯವೂ ಜಗಳ ನಡೆಯುತ್ತಿತ್ತು. ಪತ್ನಿ ಕಿರುಕುಳದಿಂದ ನೊಂದ ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ನಿ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗಗನ್ ರಾವ್ ಸಹೋದರಿ, ಮೇಘನಾ ವಿರುದ್ಧ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.