ಚುನಾವಣಾ ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ ಆರೋಪ: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ
ಚುನಾವಣಾ ಆಯೋಗಕ್ಕೆ ಸಚಿವ ಶಿವರಾಜ್ ತಂಗಡಗಿ ಅವರು ಸಲ್ಲಿಸಿರುವ ಅಫಿಡವಿಟ್ನಲ್ಲಿ ಕೆಲವು ಆಸ್ತಿಗಳನ್ನು ಉದ್ದೇಶಪೂರ್ವಕವಾಗಿ ಬಹಿರಂಗಪಡಿಸಿಲ್ಲ. ಸುಳ್ಳು ಮಾಹಿತಿಯನ್ನು ಒದಗಿಸಿದ್ದಾರೆ.

ಬೆಂಗಳೂರು: ಸಚಿವ ಶಿವರಾಜ್ ತಂಗಡಗಿ ಅವರು ಚುನಾವಣಾ ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಆರೋಪಿಸಿದ್ದು, ಈ ಸಂಬಂಧ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಆಗ್ರಹಿಸಿದ್ದಾರೆ.
ಈ ಸಂಬಂಧ ರಾಜ್ಯಪಾಲರಿಗೆ ಪತ್ರ ಬರೆದಿರುವ ಅವರು, ಚುನಾವಣಾ ಆಯೋಗಕ್ಕೆ ಸಚಿವ ಶಿವರಾಜ್ ತಂಗಡಗಿ ಅವರು ಸಲ್ಲಿಸಿರುವ ಅಫಿಡವಿಟ್ನಲ್ಲಿ ಕೆಲವು ಆಸ್ತಿಗಳನ್ನು ಉದ್ದೇಶಪೂರ್ವಕವಾಗಿ ಬಹಿರಂಗಪಡಿಸಿಲ್ಲ. ಸುಳ್ಳು ಮಾಹಿತಿಯನ್ನು ಒದಗಿಸಿದ್ದಾರೆ. ಈ ಮೂಲಕ ದಾರಿ ತಪ್ಪಿಸಿದ್ದಾರೆ. ಇದು ಚುನಾವಣಾ ಸಮಗ್ರತೆಯ ಉಲ್ಲಂಘನೆ ಗಂಭೀರ ಅಪರಾಧವಾಗಿದೆ ಆರೋಪಿಸಿದ್ದಾರೆ.
ಆಲ್ಲದೆ, ತಮ್ಮ ಅಧಿಕಾರವನ್ನು ಬಳಸಿಕೊಂಡು ಸಚಿವರ ವಿರುದ್ಧ ಖಾಸಗಿ ದೂರು ದಾಖಲಿಸಲು ಅಥವಾ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಬೇಕೆಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



