ಪ್ರಧಾನಿ ಮೋದಿ ಹೊಣೆಗಾರಿಕೆ: ಹಳೆಯ ವಿಡಿಯೋ ಹಂಚಿಕೊಂಡು ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ; Video
ಪ್ರಧಾನಿ ನರೇಂದ್ರ ಮೋದಿ ಅವರ ಹೊಣೆಗಾರಿಕೆಯನ್ನು ಮುಖ್ಯಮಂತ್ರಿ ಮೋದಿ ಅವರಿಗಿಂತ ಚೆನ್ನಾಗಿ ಬೇರೆ ಯಾರೂ ಬೈಯಲು ಸಾಧ್ಯವಿಲ್ಲ. ಪ್ರಧಾನಿ ಪಾಲಿಗೆ ಹೊಣೆಗಾರಿಕೆ ಎಂಬುದು ಇತರರಿಗೆ ಮಾತ್ರ ಅನ್ವಯಿಸುತ್ತದೆ ಎಂದಿದ್ದಾರೆ.

ಬೆಂಗಳೂರು: ಹೊಣೆಗಾರಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನರೇಂದ್ರ ಮೋದಿ ಅವರು ಗುಜರಾತ್ ನಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಭಯೋತ್ಪಾದನೆ ಕುರಿತು ನೀಡಿದ್ದ ಹೇಳಿಕೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಹೊಣೆಗಾರಿಕೆಯನ್ನು ಮುಖ್ಯಮಂತ್ರಿ ಮೋದಿ ಅವರಿಗಿಂತ ಚೆನ್ನಾಗಿ ಬೇರೆ ಯಾರೂ ಬೈಯಲು ಸಾಧ್ಯವಿಲ್ಲ. ಪ್ರಧಾನಿ ಪಾಲಿಗೆ ಹೊಣೆಗಾರಿಕೆ ಎಂಬುದು ಇತರರಿಗೆ ಮಾತ್ರ ಅನ್ವಯಿಸುತ್ತದೆ ಎಂದಿದ್ದಾರೆ.
ವಿರೋಧ ಪಕ್ಷದಲ್ಲಿದ್ದಾಗ ಹೊಣೆಗಾರಿಕೆ ಬಗ್ಗೆ ಮಾತನಾಡುವ ಪ್ರಧಾನಿ ಅಧಿಕಾರದಲ್ಲಿದ್ದಾಗ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಾರೆ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ಓರ್ವ ಪಲಾಯನವಾದಿ, ಸುದ್ದಿಗೋಷ್ಠಿಯಿಂದ ತಪ್ಪಿಸಿಕೊಳ್ಳುತ್ತಾರೆ, ಸಂಸತ್ತನ್ನು ಕಡೆಗಣಿಸುತ್ತಾರೆ. ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ವಿಷಯಾಂತರ ಮಾಡ್ತಾರೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



