ರಾಜ್ಯ

ತಾಂತ್ರಿಕ ಸಮಸ್ಯೆ: ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ಕೆಲ ಹೊತ್ತು ಸಂಚಾರ ವ್ಯತ್ಯಯ

ಇಂದು ಬೆಳಗ್ಗೆ ಕಚೇರಿ, ಕೆಲಸ ಕಾರ್ಯಗಳಿಗೆ ಜನರು ತೆರಳುವ ಸಮಯದಲ್ಲಿ ಹೀಗೆ ಆಗಿದೆ. ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ತಾಂತ್ರಿಕ ಸಮಸ್ಯೆ: ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ಕೆಲ ಹೊತ್ತು ಸಂಚಾರ ವ್ಯತ್ಯಯ
ನಮ್ಮ ಮೆಟ್ರೊ
Published On :

ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದ (Namma Metro Yellow Line) ರೈಲಿನಲ್ಲಿ ಇಂದು ಬುಧವಾರ ತಾಂತ್ರಿಕ ತೊಂದರೆ ಉಂಟಾಗಿದ್ದು, ಪರಿಣಾಮವಾಗಿ ಈ ಮಾರ್ಗದಲ್ಲಿ ಸಂಚಾರ ಕೆಲ ಕಾಲ ವ್ಯತ್ಯಯವುಂಟಾಗಿ ನಂತರ ಸರಿಯಾಯಿತು ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿದೆ.

ಇಂದು ಬೆಳಗ್ಗೆ ಕಚೇರಿ, ಕೆಲಸ ಕಾರ್ಯಗಳಿಗೆ ಜನರು ತೆರಳುವ ಸಮಯದಲ್ಲಿ ಹೀಗೆ ಆಗಿದೆ. ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾದ ಕಾರಣ, ರೈಲು ಸಂಚಾರದಲ್ಲಿ ವಿಳಂಬ ಉಂಟಾಯಿತು. ನಮ್ಮ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ತಿಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ನಮ್ಮ ಮೆಟ್ರೋ ಅಧಿಕೃತ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್ ಮಾಡಿದೆ.

ತಾಂತ್ರಿಕ ಸಮಸ್ಯೆಯನ್ನು 8:47 ಗಂಟೆಗೆ ಸರಿಪಡಿಸಲಾಯಿತು. ಹಳದಿ ಮಾರ್ಗದಲ್ಲಿರುವ ಎಲ್ಲಾ ರೈಲುಗಳು ಈಗ ಸೇವೆಯಲ್ಲಿವೆಯ.ವೇಳಾಪಟ್ಟಿಯ ಪ್ರಕಾರ ಓಡುತ್ತವೆ. ನಮ್ಮ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ಎಂದು ತಿಳಿಸಿದೆ.

ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ಇತ್ತೀಚೆಗಷ್ಟೇ ಐದನೇ ರೈಲು ಸಂಚಾರ ಆರಂಭವಾಗಿ ಪ್ರತಿ 15 ನಿಮಿಷಕ್ಕೆ ಒಂದು ರೈಲು ಸಂಚಾರ ಮಾಡುವಂತೆ ಆಗಿದ್ದು, ಪ್ರಯಾಣಿಕರಿಗೂ ಅನುಕೂಲವಾಗಿತ್ತು.

ಮೆಟ್ರೋ ನೇರಳೆ ಮಾರ್ಗದಲ್ಲೂ ಉಂಟಾಗಿತ್ತು ಸಂಚಾರ ವ್ಯತ್ಯಯ

ಚಲ್ಲಘಟ್ಟದಿಂದ ವೈಟ್ ಫೀಲ್ಡ್ ವರೆಗಿನ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಇತ್ತೀಚೆಗೆ ಇದೇ ರೀತಿ ಬೆಳಗ್ಗೆ ಸಂಚಾರ ವ್ಯತ್ಯಯವಾಗಿತ್ತು. ಪ್ರಯಾಣಿಕರು ಸುಮಾರು ಹೊತ್ತು ಕಾಯುವಂತಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.