Delhi blast: ಉಗ್ರರಿಗೆ ಇಂಬು ನೀಡುವಂತೆ ಕಾಂಗ್ರೆಸ್ ನಾಯಕರ ಬೇಜವಾಬ್ದಾರಿ ಹೇಳಿಕೆ, ಕೀಳುಮಟ್ಟದ ರಾಜಕೀಯ- ಬಿಜೆಪಿ ಕಿಡಿ
ದೆಹಲಿ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಿಂದ ದೇಶವೇ ತಲ್ಲಣಗೊಂಡಿದೆ. ಇಂಥ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟಿನ ಬಲ ಪ್ರದರ್ಶಿಸದೆ ಉಗ್ರರಿಗೆ ಹಾಸಿಗೆ ಹಾಸಿಕೊಟ್ಟಂತೆ ವ್ಯತಿರಿಕ್ತ ಮಾತುಗಳನ್ನಾಡುತ್ತಿದ್ದಾರೆ

ಬೆಂಗಳೂರು: ದೇಶದಲ್ಲಿ ಎಲ್ಲೇನೇ ಸ್ಫೋಟ, ಭಯೋತ್ಪಾದನೆ ದಾಳಿ ನಡೆದಾಗಲೂ ಕಾಂಗ್ರೆಸ್ ತೀರಾ ಕೀಳುಮಟ್ಟದ ರಾಜಕೀಯಕ್ಕೆ ಇಳಿಯುತ್ತದೆ. ಈಗ ದೆಹಲಿ ಸ್ಫೋಟದಲ್ಲೂ ಅದನ್ನೇ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ದೆಹಲಿ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಿಂದ ದೇಶವೇ ತಲ್ಲಣಗೊಂಡಿದೆ. ಇಂಥ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟಿನ ಬಲ ಪ್ರದರ್ಶಿಸದೆ ಉಗ್ರರಿಗೆ ಹಾಸಿಗೆ ಹಾಸಿಕೊಟ್ಟಂತೆ ವ್ಯತಿರಿಕ್ತ ಮಾತುಗಳನ್ನಾಡುತ್ತಿದ್ದಾರೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಫೋಟಕ್ಕೂ ಬಿಹಾರ ಚುನಾವಣೆಗೂ ಏನು ಸಂಬಂಧ? ಕಾಂಗ್ರೆಸ್ ನಾಯಕರು ಸ್ವಲ್ಪ ಸೂಕ್ಷ್ಮಮತೀಯರಾಗಿ ವರ್ತಿಸಲಿ. ಉಗ್ರರಿಗೆ ಇಂಬು ನೀಡುವಂತೆ ಬೇಜವಾಬ್ದಾರಿ ಹೇಳಿಕೆ, ಕೀಳು ಮಟ್ಟದ ರಾಜಕೀಯ ಮಾಡುವುದನ್ನು ಬಿಡಬೇಕೆಂದು ಜಮೀರ್ ಅಹ್ಮದ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ದೆಹಲಿಯಲ್ಲಿ ಕಾರು ಸ್ಪೋಟದಿಂದ 12 ಜನ ಅಮಾಯಕರು ಮೃತಪಟ್ಟು, ಹಲವರು ಗಾಯಗೊಂಡರೂ ಇವರು ಜೀವದ ಬೆಲೆ ಅರಿಯದವರಂತೆ ಮಾತನಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
ದೆಹಲಿ ಸ್ಪೋಟ-ಭಯೋತ್ಪಾದಕ ಕೃತ್ಯದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ, ಕಾಂಗ್ರೆಸ್ ನಾಯಕರು ಮುಂಚಿತವಾಗಿಯೇ ತೀರ್ಮಾನಕ್ಕೆ ಬಂದು ಬಿಡುತ್ತಿದ್ದಾರೆ. ಬೆಂಗಳೂರು ಕೆಫೆ ಸ್ಫೋಟ, ಪೆಹಲ್ಗಾಮ್ ಭಯೋತ್ಪಾದನಾ ದಾಳಿ ಹೀಗೆ ಪ್ರತಿ ಸಂದರ್ಭದಲ್ಲೂ ಪಾಕಿಸ್ತಾನದ ಮಾದರಿಯಲ್ಲೇ ಹೇಳಿಕೆ ನೀಡುತ್ತಾರೆ ಎಂದು ಹರಿ ಹಾಯ್ದಿದ್ದಾರೆ.
ದೇಶದಲ್ಲಿ ಎಲ್ಲೇ ಆಗಲಿ ಭಯೋತ್ಪಾದನಾ ದಾಳಿ ನಡೆದಾಗ ಉಗ್ರರನ್ನು ಸೆದೆಬಡಿಯಲು ಪಕ್ಷಾತೀತವಾಗಿ ಬೆಂಬಲಿಸಬೇಕು ಮತ್ತು ಒಗ್ಗಟ್ಟಿನ ಬಲ ಪ್ರದರ್ಶಿಸಬೇಕು. ಉಗ್ರರ ವಿರುದ್ಧ ಒಂದೇ ಗಟ್ಟಿ ಧ್ವನಿ ಮೊಳಗಿಸಬೇಕು. ಆದರೆ ಕಾಂಗ್ರೆಸ್ ನಾಯಕರು ಹೀಗೆ ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ದುರಂತ ಮತ್ತು ದೇಶದ ದೌರ್ಭಾಗ್ಯ ಎಂದು ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



