ಕೊಡಗು: ಕಾರಿನಲ್ಲಿ ಶವ ಸಾಗಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ
ಮೃತ ಮಹಿಳೆಯನ್ನು ನಾಂಕಿ ದೇವಿ (45) ಎಂದು ಗುರುತಿಸಲಾಗಿದ್ದು, ಇವರು ಹರಿಯಾಣ ಮೂಲದವರಾಗಿದ್ದು, ಮೈಸೂರಿನಲ್ಲಿ ತಮ್ಮ ಪತಿಯೊಂದಿಗೆ ವಾಸಿಸುತ್ತಿದ್ದರು ಎಂದ ವರದಿಗಳು ತಿಳಿಸಿವೆ.

ಮಡಿಕೇರಿ: ಕೊಡಗು ಜಿಲ್ಲೆಯ ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್‌ನಲ್ಲಿ ಕಾರೊಂದರಲ್ಲಿ ಶವ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಕೊಡಗು ಜಿಲ್ಲೆಯ ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್‌ನಲ್ಲಿರುವ ಅರಣ್ಯ ಇಲಾಖೆ ಸಿಬ್ಬಂದಿ ನಿಯಮಿತ ವಾಹನ ತಪಾಸಣೆಯ ಸಮಯದಲ್ಲಿ ಅನುಮಾನಗೊಂಡು ಕಾರೊಂದನ್ನು ತಪಾಸಣೆ ನಡೆಸಿದ್ದು, ಈ ವೇಳೆ ಕಾರಿನಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಮೃತ ಮಹಿಳೆಯನ್ನು ನಾಂಕಿ ದೇವಿ (45) ಎಂದು ಗುರುತಿಸಲಾಗಿದ್ದು, ಇವರು ಹರಿಯಾಣ ಮೂಲದವರಾಗಿದ್ದು, ಮೈಸೂರಿನಲ್ಲಿ ತಮ್ಮ ಪತಿಯೊಂದಿಗೆ ವಾಸಿಸುತ್ತಿದ್ದರು ಎಂದ ವರದಿಗಳು ತಿಳಿಸಿವೆ.
ಮಾಹಿತಿ ತಿಳಿದ ಕೂಡಲೆ ಸಿದ್ದಾಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿದ್ದು, ಕಾರಿನಲ್ಲಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಸಿದ್ದಾಪುರ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



