ರಾಜ್ಯ

ಮಣ್ಣಲ್ಲಿ ಮಣ್ಣಾದ ʻವೃಕ್ಷಮಾತೆʼ; ಸಕಲ ಸರ್ಕಾರಿ ಗೌರವಗಳೊಂದಿಗೆ ತಿಮ್ಮಕ್ಕ ಅಂತ್ಯಕ್ರಿಯೆ

ಇಂದು ಮಧ್ಯಾಹ್ನ ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶತಾಯುಷಿ, 114 ವರ್ಷದ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಿತು.

ಮಣ್ಣಲ್ಲಿ ಮಣ್ಣಾದ ʻವೃಕ್ಷಮಾತೆʼ; ಸಕಲ ಸರ್ಕಾರಿ ಗೌರವಗಳೊಂದಿಗೆ ತಿಮ್ಮಕ್ಕ ಅಂತ್ಯಕ್ರಿಯೆ
ಸಾಲು ಮರದ ತಿಮ್ಮಕ್ಕ
Published On :

ಬೆಂಗಳೂರು: ಶುಕ್ರವಾರ ನಿಧನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ಶನಿವಾರ ಬೆಂಗಳೂರಿನ ಜ್ಞಾನಭಾರತಿ ಕಲಾಗ್ರಾಮದ ಮಣ್ಣಲ್ಲಿ ಮಣ್ಣಾಗಿದ್ದು, ವೃಕ್ಷಮಾತೆ ಇನ್ನೂ ನೆನಪು ಮಾತ್ರ.

ಇಂದು ಮಧ್ಯಾಹ್ನ ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶತಾಯುಷಿ, 114 ವರ್ಷದ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಿತು. ಈ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ಪೊಲೀಸರು ತಿಮ್ಮಕ್ಕ ಅವರಿಗೆ ವಿಶೇಷ ಗೌರವ ಸಲ್ಲಿಸಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ವೃಕ್ಷಮಾತೆಗೆ ಅಂತಿಮ ಗೌರವ ಸಲ್ಲಿಸಿದರು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತಿಮ್ಮಕ್ಕ ಅವರನ್ನು ಎರಡು ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು.

ಅನಕ್ಷರಸ್ಥೆಯಾಗಿದ್ದ ತಿಮ್ಮಕ್ಕನವರು ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಅಪ್ರತಿಮ ಪರಿಸರವಾದಿ. ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದ್ದರ ಹಿನ್ನೆಲೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳೂ ಅವರು ಭಾಜನರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.