ರಾಜ್ಯ

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೊ ಆಸ್ಪತ್ರೆಗೆ ಪಾರ್ವತಿ ಅವರನ್ನು ದಾಖಲಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!
ಸಿದ್ದರಾಮಯ್ಯ-ಪಾರ್ವತಿ
Published On :

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೊ ಆಸ್ಪತ್ರೆಗೆ ಪಾರ್ವತಿ ಅವರನ್ನು ದಾಖಲಿಸಲಾಗಿದೆ. ಪಾರ್ವತಿ ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಡಾ. ಬಿಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಐಸಿಯುನಲ್ಲಿ ಪಾರ್ವತಿಗೆ ಚಿಕಿತ್ಸೆ ನೀಡುತ್ತಿದ್ದು ನಾಳೆಯವರೆಗೂ ನಿಗವಹಿಸಲು ಸೂಚಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯಲ್ಲಿರುವ ಸಿದ್ದರಾಮಯ್ಯ ವೈದ್ಯರಿಗೆ ಕರೆ ಮಾಡಿ ಪತ್ನಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.