ರಾಜ್ಯ

ವಿಜಯಪುರ: ನಾನಿನ್ನು ಸಹಿಸಲಾರೇ... ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಸಮೀರ್ ಕತ್ತು ಹಿಸುಕಿ ಕೊಂದ ಮಹಿಳೆ!

ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಪ್ರಿಯಕರನ ಕತ್ತುಹಿಸುಕಿ ಮಹಿಳೆಯೇ ಕೊಲೆ ಮಾಡಿರುವ ಘಟನೆ ವಿಜಯಪುರದ ಅಮನ್ ಕಾಲೋನಿಯಲ್ಲಿ ನಡೆದಿದೆ. ಮೃತನನ್ನು 26 ವರ್ಷದ ಸಮೀರ್ ಅಲಿಯಾಸ್ ಪಿಕೆ ಇನಾಂದಾರ್ ಎಂದು ಗುರುತಿಸಲಾಗಿದೆ.

ವಿಜಯಪುರ: ನಾನಿನ್ನು ಸಹಿಸಲಾರೇ... ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಸಮೀರ್ ಕತ್ತು ಹಿಸುಕಿ ಕೊಂದ ಮಹಿಳೆ!
ರೌಡಿಶೀಟರ್ ಸಮೀರ್ ಹತ್ಯೆ
Published On :

ವಿಜಯಪುರ: ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಪ್ರಿಯಕರನ ಕತ್ತುಹಿಸುಕಿ ಮಹಿಳೆಯೇ ಕೊಲೆ ಮಾಡಿರುವ ಘಟನೆ ವಿಜಯಪುರದ ಅಮನ್ ಕಾಲೋನಿಯಲ್ಲಿ ನಡೆದಿದೆ. ಮೃತನನ್ನು 26 ವರ್ಷದ ಸಮೀರ್ ಅಲಿಯಾಸ್ ಪಿಕೆ ಇನಾಂದಾರ್ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ತಯ್ಯಾಬಾ ತನ್ನ ಸಹೋದರ ಅಸ್ಲಮ್ ಸಹಾಯ ಪಡೆದು ಕೊಲೆ ಮಾಡಿದ್ದಾಳೆ. ರಾತ್ರಿಯೆಲ್ಲಾ ಶವದೊಂದಿಗೆ ಕಳೆದಿದ್ದ ಮಹಿಳೆ ಬೆಳಗ್ಗೆ ಗೋಲಗುಂಬಜ್ ಪೊಲೀಸ್ ಠಾಣಾಗೆ ತೆರಳಿ ಕೊಲೆ ವಿಚಾರ ಬಹಿರಂಗಪಡಿಸಿದ್ದಾಳೆ. ನಂತರ ಘಟನಾ ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿ ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ರೌಡಿ ಶೀಟರ್ ಆಗಿದ್ದ ಸಮೀರ್ ಮಹಿಳೆಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ಬೇಸತ್ತ ತಯ್ಯಾಬಾ ಆತನನ್ನು ಕೊಲೆ ಮಾಡುವ ನಿರ್ಧಾರಕ್ಕೆ ಬಂದಿದ್ದಾಳೆ. ಇದಕ್ಕೆ ತಮ್ಮನ ಸಹಾಯವನ್ನು ಮಹಿಳೆ ಪಡೆದಿದ್ದಾಳೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.