ರಿಲ್ಯಾಕ್ಸ್ ಮೂಡ್ ನಲ್ಲಿ CM-DCM: ದೆಹಲಿಯಲ್ಲಿ ಜತೆಯಾಗಿಯೇ ಭೋಜನ ಸವಿದ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್
ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಿಢೀರ್ ಮುಖಾಮುಖಿಯಾದರು. ಈ ವೇಳೆ ನಗುಮೊಗದಲ್ಲೇ ಪರಸ್ಪರ ಹಸ್ತಲಾಘವ ಮಾಡಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ-ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಸಂಪುಟ ಪುನಾರಚನೆಯೋ ಅಥವಾ ನಾಯಕತ್ವ ಬದಲಾವಣೆಯೋ ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಈ ನಡುವೆ ಸಿಎಂ- ಡಿಸಿಎಂ ಮಾತ್ರ ರಿಲ್ಯಾಕ್ಸ್ ಮೂಡ್‌ನಲ್ಲಿದ್ದರು. ಅಷ್ಟೇ ಅಲ್ಲ, ಇಬ್ಬರೂ ಒಟ್ಟಿಗ ಭೋಜನ ಸವಿದರು.
ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಿಢೀರ್ ಮುಖಾಮುಖಿಯಾದರು. ಈ ವೇಳೆ ನಗುಮೊಗದಲ್ಲೇ ಪರಸ್ಪರ ಹಸ್ತಲಾಘವ ಮಾಡಿ, ಸ್ಥಳದಲ್ಲಿದ್ದ ಮಾಧ್ಯಮಗಳಿಗೆ ಪೋಸು ಕೊಟ್ಟರು. ನಂತರ ಇಬ್ಬರೂ ಮಧ್ಯಾಹ್ನದ ಊಟವನ್ನೂ ಸವಿದರು.
ನ. 14ಕ್ಕೇ ದೆಹಲಿಗೆ ತೆರಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಅಲ್ಲಿಯೇ ಬೀಡುಬಿಟ್ಟಿದ್ದರು. ಈ ಅವಧಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ, ಹಲವು ರಾಜಕೀಯ ವಿಷಯಗಳ ಕುರಿತು ಚರ್ಚೆ ನಡೆಸಿದರು. ಅದರಲ್ಲಿ ನಾಯಕತ್ವ ಬದಲಾವಣೆ ಕೂಡ ಒಂದಾಗಿತ್ತು ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



