ರಾಜ್ಯ

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ; ಪವಾಡಸದೃಶ 33 ಮಂದಿ ಪಾರು; Video

ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು.

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ; ಪವಾಡಸದೃಶ 33 ಮಂದಿ ಪಾರು; Video
ಪಲ್ಟಿ ಹೊಡೆದ ಬಸ್
Published On :

ಮಂಡ್ಯ: ಶಬರಿಮಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಬಳಿ ಅಪಘಾತ ಸಂಭವಿಸಿದೆ.

ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ಕೇರಳದ ಏರಿಮಲೈ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತವಿಲ್ಲದೇ ಬಸ್‌ನಲ್ಲಿದ್ದವರು ಪಾರಾಗಿದ್ದಾರೆ.

ಕೆಲ ಮಾಲಾಧಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಏರಿಮಲೈ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.