ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ: ನಾಗರಹೊಳೆಯಲ್ಲಿ ಚೈನ್ ಲಿಂಕ್ ಮೆಶ್ ಅಳವಡಿಕೆ..!
ಮೈಸೂರಿನ ಎಚ್‌ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ಮೀಸಲು ಪ್ರದೇಶದಲ್ಲಿ 13 ಕಿ.ಮೀ. ಉದ್ದಕ್ಕೂ ಚೈನ್ ಲಿಂಕ್ ಮೆಶ್ ಅಳವಡಿಸಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

ಮೈಸೂರು: ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ಪರಿಹರಿಸುವ ಪ್ರಯತ್ನದಲ್ಲಿ, ಅರಣ್ಯ ಅಧಿಕಾರಿಗಳು ಮೈಸೂರಿನ ಎಚ್‌ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ಮೀಸಲು ಪ್ರದೇಶದಲ್ಲಿ 13 ಕಿ.ಮೀ. ಉದ್ದಕ್ಕೂ ಚೈನ್ ಲಿಂಕ್ ಮೆಶ್ ಅಳವಡಿಸಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.
ಈ ತಡೆಗೋಡೆಯನ್ನು ಪ್ರಸ್ತುತ ಪ್ರಾಯೋಗಿಕವಾಗಿ ನಿರ್ಮಿಸಲಾಗುತ್ತಿದ್ದು, ಈ ಪ್ರಯೋಗ ಯಶಸ್ವಿಯಾದರೆ, ಮತ್ತಷ್ಟು ವಿಸ್ತರಿಸಿ 10 ಅಡಿ ಎತ್ತರಕ್ಕೆ ಏರಿಸಿ ಅಳವಡಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಯೋಜನೆಯು ಆರಂಭಿಕ ಹಂತದಲ್ಲಿದ್ದರೂ, ಜಾಲರಿ ಬೇಲಿ ಬಲವಾದ ಭೌತಿಕ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ, ಕಾಡು ಪ್ರಾಣಿಗಳು ಜನರು ಮತ್ತು ಜಾನುವಾರುಗಳ ಸಂಪರ್ಕಕ್ಕೆ ಬರದಂತೆ ತಡೆಯುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದು ಸಂಘರ್ಷ ನಿರ್ವಹಣಾ ತಂತ್ರದ ಭಾಗವಾಗಿದ್ಜು. ಈ ಪ್ರಾಯೋಗಿಕ ಹಂತವು ತಡೆಗೋಡೆಯ ಕುರಿತು ಭವಿಷ್ಯದ ನಿರ್ಧಾರಗಳನ್ನು ಮಾರ್ಗದರ್ಶನ ನೀಡುತ್ತದೆ ಎಂದು ಆರ್‌ಎಫ್‌ಒ ಸಿದ್ದರಾಜು ಅವರು ತಿಳಿಸಿದರು.
ಚೈನ್-ಲಿಂಕ್ ಮೆಶ್ ಅಳವಡಿಕೆ ಸಮಾರಂಭದಲ್ಲಿ ಭಾಗವಹಿಸಿದ್ದ ಎಚ್‌ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಈ ಕ್ರಮವು ಮನುಷ್ಯ-ಪ್ರಾಣಿ ಸಂಘರ್ಷವನ್ನು ಪರಿಹರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



