ರಾಜ್ಯ

BMTC ಬಸ್ ಡಿಕ್ಕಿಯಾಗಿ ಪಾದಚಾರಿ ಸಾವು: ಮಡಿವಾಳ ಮಾರ್ಕೆಟ್ ಬಳಿ ದುರಂತ

ಎಸ್‌ಎಂಬಿಟಿ ರೈಲ್ವೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್ಗೆ ಕಾರ್ಯಾಚರಣೆಗೊಳ್ಳುತ್ತಿದ್ದ ಬಿಎಂಟಿಸಿ ಬಸ್ ಫುಟ್‌ಪಾತ್‌ನಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದಿದೆ.

BMTC ಬಸ್ ಡಿಕ್ಕಿಯಾಗಿ ಪಾದಚಾರಿ ಸಾವು: ಮಡಿವಾಳ ಮಾರ್ಕೆಟ್ ಬಳಿ ದುರಂತ
ಮೃತ
Published On :

ಬೆಂಗಳೂರು: ಬಿಎಂಟಿಸಿ ಬಸ್‌ಗೆ 65 ವರ್ಷದ ವೃದ್ಧ ಬಲಿಯಾಗಿರುವ ಘಟನೆ ಮಡಿವಾಳ ಬಸ್ ನಿಲ್ದಾಣದ ಬಳಿ ನಡೆದಿದೆ. ವೆಂಕಟರಾಮಪ್ಪ (65) ಮೃತ ವ್ಯಕ್ತಿ. ಬೆಳಗ್ಗೆ 6:30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ವೆಂಕಟರಾಮಪ್ಪ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಮಡಿವಾಳ ಮಾರ್ಕೆಟ್ ರೋಡ್‌ಗೆ ತರಕಾರಿ ತರಲು ಹೋದಾಗ ಅಪಘಾತ ನಡೆದಿದೆ. ಸದ್ಯ ವೆಂಕಟರಾಮಪ್ಪ ಮೃತದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿರಿಸಲಾಗಿದೆ.

ಮಡಿವಾಳ ಬಸ್ ನಿಲ್ದಾಣದಲ್ಲಿ ತರಕಾರಿ ತೆಗೆದುಕೊಂಡು ಬಂದಿದ್ದ ವೆಂಕಟರಾಮಪ್ಪ ಬಸ್ ಹತ್ತಲು ನಿಂತಿದ್ದರು. ಈ ವೇಳೆ ಎಸ್‌ಎಂಬಿಟಿ ರೈಲ್ವೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್ಗೆ ಕಾರ್ಯಾಚರಣೆಗೊಳ್ಳುತ್ತಿದ್ದ ಬಿಎಂಟಿಸಿ ಬಸ್ ಫುಟ್‌ಪಾತ್‌ನಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದಿದೆ. ಮೊದಲು ಟಾಟಾ ಎಸಿ ಗಾಡಿಗೆ ಡಿಕ್ಕಿಯಾಗಿ ಬಳಿಕ ವೆಂಕಟರಾಮಪ್ಪಗೆ ಬಸ್ ಗುದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.