ಕೊಲೆ ಯತ್ನ ಆರೋಪ: BJP ಮುಖಂಡ ಮಣಿಕಂಠ ರಾಠೋಡ್ ಬಂಧನ..!
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಿದ್ದಾರೆ.

ಕಲಬುರಗಿ: ಕೊಲೆ ಯತ್ನ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ಶನಿವಾರ ಬಂಧಕ್ಕೊಳಪಡಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಿದ್ದಾರೆ. ಸದ್ಯ ಮಣಿಕಂಠ ರಾಠೋಡ್ನನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಎಂಬಾತನ ಬಂಧನಕ್ಕೆ ಆಗ್ರಹಿಸಿ ಮಣಿಕಂಠ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಶೀದ್ ಬೆಂಬಲಿಗರೊಂದಿಗೆ ವಾಗ್ವಾದ ನಡೆಸಿ ಹೈಡ್ರಾಮಾ ಕ್ರಿಯೇಟ್ ಮಾಡಿದ್ದ.
ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮತ್ಯಾ ಚಾಲಕನ ದೂರಿನ ಮೇರೆಗೆ ಕೊಲೆ ಯತ್ನ ಆರೋಪದಲ್ಲಿ ಮಣಿಕಂಠ ರಾಠೋಡ್ನನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



