ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!
ಸೌತ್ ಎಂಡ್ ಸರ್ಕಲ್ ನಿಂದ ಸಿಎಂಎಸ್ ಏಜೆನ್ಸಿ ವಾಹನವನ್ನು ತಡೆದು 7 ಕೋಟಿ 11 ಲಕ್ಷ ದರೋಡೆ ಪ್ರಕರಣದ ಆರೇಳು ಮಂದಿ ಆರೋಪಿಗಳ ಪೈಕಿ ಈಗಾಗಲೇ 4 ಮಂದಿಯನ್ನು ಬಂಧಿಸಲಾಗಿದೆ.
ಚೆನ್ಮೈ: ಬೆಂಗಳೂರಿನಲ್ಲಿ ನಡೆದ ಎಟಿಎಂ ವ್ಯಾನ್ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ದುಷ್ಕರ್ಮಿಗಳು ಅಡ್ಡಗಟ್ಟಿ ಅದರಲ್ಲಿದ್ದ ಸುಮಾರು 7.11 ಕೋಟಿ ದರೋಡೆ ಮಾಡಿದ್ದರು.
ಈ ದರೋಡೆ ಪ್ರಕರಣದ ಸಂಬಂಧ ಇದೀಗ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೌತ್ ಎಂಡ್ ಸರ್ಕಲ್ ನಿಂದ ಸಿಎಂಎಸ್ ಏಜೆನ್ಸಿ ವಾಹನವನ್ನು ತಡೆದು 7 ಕೋಟಿ 11 ಲಕ್ಷ ದರೋಡೆ ಪ್ರಕರಣದ ಆರೇಳು ಮಂದಿ ಆರೋಪಿಗಳ ಪೈಕಿ ಈಗಾಗಲೇ 4 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಆಂಧ್ರ ಪ್ರದೇಶದ ತಿರುಪತಿಯಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು.
ಅಲ್ಲದೆ ಪ್ರಮುಖ ಆರೋಪಿಗಳಾದ ರವಿ ಮತ್ತು ಕಾನ್ಸ್ ಟೇಬಲ್ ಅಣ್ಣಪ್ಪನನ್ನು ಕೂಡ ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.
ಇದೀಗ ಈ ಪಟ್ಟಿಗೆ ಮತ್ತೋರ್ವ ಪ್ರಮುಖ ಆರೋಪಿ ಸೇರ್ಪಡೆಯಾಗಿದ್ದು ಕ್ಸೇವಿಯರ್ ಎಂಬಾತನನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬನಶಂಕರಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವ
ಬನಶಂಕರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೊಟ್ರೇಶಿ ನೇತೃತ್ವದ ವಿಶೇಷ ತಂಡ ತಮಿಳುನಾಡಿನಲ್ಲಿ ದಾಳಿ ನಡೆಸಿ ಆರೋಪಿಯನ್ನು ಹಿಡಿದು ತಂದಿದೆ. ಬೆಂಗಳೂರಿನ ಕಾಡುಗೊಂಡನಹಳ್ಳಿ ನಿವಾಸಿಯಾಗಿರುವ ಜೆ.ಕ್ಸೇವಿಯರ್ ದರೋಡೆಯ ನಂತರ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ.
ಆರೋಪಿಯು ಕುಪ್ಪಂ ಪ್ರದೇಶದಲ್ಲಿ ಹಣದ ಬಾಕ್ಸ್‌ನ್ನು ತೆಗೆದು ನಗದನ್ನು ಚೀಲದಲ್ಲಿ ತುಂಬಿಕೊಂಡಿದ್ದಲ್ಲದೇ ದರೋಡೆಗೆ ಬಳಸಿದ್ದ ಇನ್ನೋವಾ ಕಾರನ್ನೂ ಅಲ್ಲಿಯೇ ಬಿಟ್ಟು, ಮತ್ತೊಂದು ವ್ಯಾಗನಾರ್ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.
ಚಿತ್ತೂರಿನ ಕುಪ್ಪಂ ಬಳಿ ಹಣದ ಪೆಟ್ಟಿಗೆಗಳು ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬನಶಂಕರಿ ಠಾಣೆಯ ಇನ್ಸ್ಪೆಕ್ಟರ್ ಕೊಟ್ರೇಶಿ ನೇತೃತ್ವದ ವಿಶೇಷ ಪೊಲೀಸರ ತಂಡ ಸೆರೆಹಿಡಿದಿದೆ. ಆರೋಪಿಯನ್ನು ಸಿದ್ದಾಪುರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ಬನಶಂಕರಿ ಪೊಲೀಸರ ವಿಶೇಷ ತಂಡ ಆರೋಪಿಯನ್ನು ಪತ್ತೆ ಹಚ್ಚಿದ್ದು, ಸದ್ಯ ಸಿದ್ದಾಪುರ ಠಾಣೆಯಲ್ಲಿ ವಿಚಾರಣೆ ಮುಂದುವರಿದಿದೆ. ಈ ಹಿಂದೆ 5.30 ಕೋಟಿ ರೂ. ವಶಪಡಿಸಿಕೊಳ್ಳಲಾಗಿದ್ದು, ಎಟಿಎಂ ವಾಹನದಿಂದ ದರೋಡೆ ನಡೆಸಿದ್ದ ಆರೋಪಿಗಳ ತೀವ್ರ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


