ರಾಜ್ಯ

ಹೊರಗುತ್ತಿಗೆ ಅನ್ಯಾಯ ಸರಿಪಡಿಸಲು ರಾಜ್ಯಸರ್ಕಾರ ಬದ್ಧ: ಸಚಿವ ಎಚ್.ಕೆ ಪಾಟೀಲ್

ಕೇಂದ್ರ, ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹತೆ ಮತ್ತು ಮೀಸಲು ಮಾನದಂಡಗಳನ್ನು ನಿರ್ಲಕ್ಷಿಸಿ ಹೊರಗುತ್ತಿಗೆ ಮೂಲಕನೇಮಕಮಾಡುವ ಪದ್ಧತಿ ಸರಿಯಲ್ಲ, ದಶಕಗಳಿಂದ ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗಿ ಇಂತಹ ಅಪಚಾರ ನಡೆಯುತ್ತಿದ್ದು, ಶೀಘ್ರವೇ ಇದನ್ನು ಕೊನೆಗಾಣಿಸಲು ಪ್ರಯತ್ನ ನಡೆಸುತ್ತಿದೆ.

ಹೊರಗುತ್ತಿಗೆ ಅನ್ಯಾಯ ಸರಿಪಡಿಸಲು ರಾಜ್ಯಸರ್ಕಾರ ಬದ್ಧ: ಸಚಿವ ಎಚ್.ಕೆ ಪಾಟೀಲ್
ಎಚ್.ಕೆ ಪಾಟೀಲ್
Published On :

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಹೊರಗುತ್ತಿಗೆ ಮೂಲಕ ಆಗುತ್ತಿರುವ ಅನ್ಯಾಯ ಸರಿಪಡಿಸಲು ಬದ್ಧವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಮ ಎಚ್.ಕೆ. ಪಾಟೀಲ್‌ ಅವರು ಬುಧವಾರ ಹೇಳಿದರು.

ಡಾ.ಮನಮೋಹನ ಸಿಂಗ್ ಬೆಂಗಳೂರು ನಗರ ವಿವಿ ಡಾ.ಅಂಬೇಡ್ಕರ್‌ ಅಧ್ಯಯನ ಕೇಂದ್ರ, ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ, ಸಂವಿಧಾನ ಸೈನಿಕರ ಸಮಾವೇಶ ಉದ್ಘಾಟಿಸಿ ಸಚಿವರುಮಾತನಾಡಿದರು.

ಕೇಂದ್ರ, ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹತೆ ಮತ್ತು ಮೀಸಲು ಮಾನದಂಡಗಳನ್ನು ನಿರ್ಲಕ್ಷಿಸಿ ಹೊರಗುತ್ತಿಗೆ ಮೂಲಕನೇಮಕಮಾಡುವ ಪದ್ಧತಿ ಸರಿಯಲ್ಲ, ದಶಕಗಳಿಂದ ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗಿ ಇಂತಹ ಅಪಚಾರ ನಡೆಯುತ್ತಿದ್ದು, ಶೀಘ್ರವೇ ಇದನ್ನು ಕೊನೆಗಾಣಿಸಲು ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದರು.

ಇದೇ ವೇಳೆ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಇರುವ ಭಾರತದ ಸಂವಿಧಾನದ 4 ನೇ ದ್ವಿಭಾಷಾ ಆವೃತ್ತಿಯನ್ನು ಲೋಕಾರ್ಪಣೆ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.