ವಿಜಯಪುರ: ಸಿಲಿಂಡರ್ ಸ್ಫೋಟದಿಂದ ಗೂಡಂಗಡಿಗಳು ಸುಟ್ಟು ಕರಕಲು
ಕಳೆದ ತಡರಾತ್ರಿ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ ಐದು ತಳ್ಳುಗಾಡಿಗಳು ಮತ್ತು ರಟ್ಟಿನ ಪೆಟ್ಟಿಗೆಗಳನ್ನು ಸಂಗ್ರಹಿಸಿದ್ದ ಗೋದಾಮು ಸುಟ್ಟು ಕರಕಲಾಗಿದೆ. ನಗರದ ಲಿಂಗದಗುಡಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ವಿಜಯಪುರ: ಕಳೆದ ತಡರಾತ್ರಿ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ ಐದು ತಳ್ಳುಗಾಡಿಗಳು ಮತ್ತು ರಟ್ಟಿನ ಪೆಟ್ಟಿಗೆಗಳನ್ನು ಸಂಗ್ರಹಿಸಿದ್ದ ಗೋದಾಮು ಸುಟ್ಟು ಕರಕಲಾಗಿದೆ. ನಗರದ ಲಿಂಗದಗುಡಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ತೆರೆದ ಪ್ರದೇಶದಲ್ಲಿ ಈ ಅಂಗಡಿಗಳಿತ್ತು. ತೆರೆದ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದರಿಂದ ಯಾವುದೇ ಸಾವುನೋವು ಅಥವಾ ಗಾಯದ ವರದಿಯಾಗಿಲ್ಲ.
ಮೂಲಗಳ ಪ್ರಕಾರ, ಬೆಂಕಿಗೆ ಕಾರಣ ಬಹುಶಃ ಸಿಗರೇಟ್ ಕಿಡಿ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ರಾತ್ರಿ 11:00ರ ಸುಮಾರಿಗೆ ಘಟನೆ ನಡೆದಿದ್ದು ಬೆಂಕಿಯಿಂದಾಗಿ ಸಿಲಿಂಡರ್ ಸ್ಫೋಟಗೊಂಡಿದ್ದು ಅಂಗಡಿಗಳು ಸುಟ್ಟು ಕರಕಲಾಗಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಕನಿಷ್ಠ ನಾಲ್ಕು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಹತ್ತಿರದ ಮನೆಯ ಗೋಡೆಗೆ ಹಾನಿಯಾಗಿದ್ದು ಮಾತ್ರವಲ್ಲದೆ ನಿರ್ಮಾಣ ಹಂತದಲ್ಲಿರುವ ಕಟ್ಟಡದೊಳಗೆ ಇರಿಸಲಾಗಿದ್ದ ರಟ್ಟಿನ ಪೆಟ್ಟಿಗೆಗಳು ಸಹ ಸುಟ್ಟುಹೋಗಿವೆ ಎಂದು ಅವರು ಹೇಳಿದರು.
ಏತನ್ಮಧ್ಯೆ, ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಮನೆಯಲ್ಲಿದ್ದ ನಿವಾಸಿಗಳು ಆಘಾತಕ್ಕೊಳಗಾಗಿ ಮನೆಯಿಂದ ಹೊರಬಂದರು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸುಮಾರು ಐದು ಅಗ್ನಿಶಾಮಕ ಯಂತ್ರಗಳನ್ನು ಬಳಸಿದ್ದರೂ, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲು ಒಂದು ಗಂಟೆಗೂ ಹೆಚ್ಚು ಸಮಯ ಹಿಡಿಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



