ರೈತರಿಂದಲೇ ನೇರವಾಗಿ ಮೆಕ್ಕೆಜೋಳ ಖರೀದಿಸಿ: ಡಿಸ್ಟಿಲರಿಗಳಿಗೆ ಸಿಎಂ ಸೂಚನೆ
ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ.

ಬೆಂಗಳೂರು: ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ.
ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ವಿಧಾನಸೌಧದ ಸಭಾಂಗಣದಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿದರು.
ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ. ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ. ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ. ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ ರೂ.2,639 ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ.
ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 2,48,461 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್‌ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 5,02,056 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ. ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



