ನನಗೆ ವಂಚಿಸಿದ್ದರೂ ನಿನ್ನನ್ನು ಬಿಟ್ಟು ಬದುಕಲಾರೆ: ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮಹತ್ಯೆ!
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಂಜಿನಿಯರಿಂಗ್ ಪದವೀಧರೆ ಹಾಸನ ಮೂಲದ 22 ವರ್ಷದ ಅಚಲ ಬೆಂಗಳೂರಿನ ಪಾಂಡುರಂಗ ನಗರದ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅಚಲ ಸಾವಿನ ಕುರಿತಂತೆ ನಟಿ ಆಶಿಕಾ ರಂಗನಾಥ್ 'Gone Too Soon' ಎಂದು ಪೋಸ್ಟ್ ಮಾಡಿದ್ದಾರೆ.
ತಾನು ಅಚಲಳನ್ನು ಮದುವೆಯಾಗುತ್ತೇನೆಂದು ಮಾಯಾಂಕ್ ಅಚಲ ಪೋಷಕರನ್ನು ಒಪ್ಪಿಸಿದ್ದನು. ಅದೇ ಸಲುಗೆಯಲ್ಲಿ ಲೈಂಗಿಕ ಸಂಪರ್ಕಕ್ಕೆ ಮಾಯಾಂಕ್ ಪೀಡಿಸುತ್ತಿದ್ದನು. ಇದಕ್ಕೆ ಒಪ್ಪದ್ದಕ್ಕೆ ಅಚಲ ಆಕೆಯ ಮೇಲೆ ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಅಚಲ ನೇಣಿಗೆ ಶರಣಾಗಿದ್ದಾಳೆ ಎಂದು ಪೋಷಕರು ಪುಟ್ಟೇನಹಳ್ಳಿ ಠಾಣೆಯಲ್ಲಿ ಮಯಾಂಕ್ ಹಾಗೂ ಆತನ ತಾಯಿ ವಿರುದ್ಧ ದೂರು ನೀಡಿದ್ದಾರೆ.
ಈ ದೂರು ಆಧರಿಸಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಡ್ರಗ್ ಅಡಿಕ್ಟ್ ಆಗಿರುವ ಮಯಾಂಕ್ ಹಲವು ಯುವತಿಯೊಂದಿಗೆ ಸಂಬಂಧ ಹೊಂದಿದ್ದ ಎಂಬ ವಿಚಾರ ಅಚಲಗೆ ಗೊತ್ತಾಗಿ ಮನೆಯಲ್ಲಿ ವಿಷಯ ಹೇಳಿದ್ದಳು. ಇದರಿಂದ ಕೋಪಗೊಂಡ ಮಾಯಾಂಕ್ ಪದೇ ಪದೇ ಕಿರುಕುಳ ಹಿಂಸೆ ನೀಡುತ್ತಿದ್ದನು. ಅಲ್ಲದೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಮಾಯಾಂಕ್ ತನಗೆ ವಂಚಿಸಿರುವ ವಿಷಯ ತಿಳಿದರೂ ಅಚಲ ಆತನ ಮೇಲಿನ ಪ್ರೀತಿ ಕಡಿಮೆಯಾಗಿರಲಿಲ್ಲ. ಹೀಗಾಗಿ ಅಚಲ ಆತನಿಗೆ ಮೆಸೇಜ್ ಮಾಡಿ, ಜೀವನದಲ್ಲಿ ನಿನ್ನ ಬಿಟ್ಟು ನನಗೆ ಬದುಕಲು ಸಾಧ್ಯವಿಲ್ಲ. ನೀನು ನನಗೆ ಮೋಸ ಮಾಡಿದರೂ ನಿನ್ನನ್ನು ಮರೆಯಲು ಆಗುತ್ತಿಲ್ಲ. ನನ್ನ ಕನಸುಗಳನ್ನು ನೀನು ನುಚ್ಚು ನೂರು ಮಾಡಿದ್ದೀಯ. ನನಗೆ ನೀನು ಮೋಸ ಮಾಡಿಲ್ಲವಾದರೆ ರಾಘವೇಂದ್ರ ಸ್ವಾಮಿ ಮೇಲೆ ಆಣೆ ಮಾಡು. ನೀನು ಮಾಡಿದ ಮೋಸಕ್ಕೆ ತಕ್ಕ ಬೆಲೆ ಕಟ್ಟಲೇಬೇಕು ಎಂದು ಕೊನೆಯ ಬಾರಿಗೆ ಅಚಲ ಮೆಸೇಜ್ ಮಾಡಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



