ರಾಜ್ಯ

ಹಣ ನೀಡುವಂತೆ ಸ್ನೇಹಿತ ಕಿರುಕುಳ; ನವವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು

ಬುಧವಾರ ರಾತ್ರಿ 9.30 ರ ಸುಮಾರಿಗೆ ವೈಷ್ಣವಿ ತಮ್ಮ ಮನೆಯಲ್ಲಿ ಇಲಿ ಪಾಷಣ ಸೇವಿಸಿದ್ದು, ವಿಷ ಸೇವಿಸಿ ನಂತರ ಫೋಟೋವನ್ನು ವಾಟ್ಸಾಪ್‌ನಲ್ಲಿ ಪತಿಗೆ ಕಳುಹಿಸಿದ್ದಾರೆ.

ಹಣ ನೀಡುವಂತೆ ಸ್ನೇಹಿತ ಕಿರುಕುಳ; ನವವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು
ಸಾಂಕೇತಿಕ ಚಿತ್ರ — online desk
Published On :

ಬೆಂಗಳೂರು: ಹಣ ನೀಡುವತೆ ಸ್ನೇಹಿತನೊಬ್ಬ ನೀಡಿದ ಕಿರುಕುಳಕ್ಕೆ ನೊಂದು ನವವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕಮಲನಗರದಲ್ಲಿ ನಡೆದಿದೆ.

ಮೃತ ಮಹಿಳೆಯನ್ನ ವೈಷ್ಣವಿ ಎಂದು ಗುರ್ತಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ವೈಷ್ಣವಿ ವಿಜಯ್ ಸಿ ಎಂಬುವವರನ್ನು ವಿವಾಹವಾಗಿದ್ದು, ದಂಪತಿಗಳು ಕಮಲನಗರದಲ್ಲಿ ವಾಸವಿದ್ದರು.

ಬುಧವಾರ ರಾತ್ರಿ 9.30 ರ ಸುಮಾರಿಗೆ ವೈಷ್ಣವಿ ತಮ್ಮ ಮನೆಯಲ್ಲಿ ಇಲಿ ಪಾಷಣ ಸೇವಿಸಿದ್ದು, ವಿಷ ಸೇವಿಸಿ ನಂತರ ಫೋಟೋವನ್ನು ವಾಟ್ಸಾಪ್‌ನಲ್ಲಿ ಪತಿಗೆ ಕಳುಹಿಸಿದ್ದಾರೆ.

ಕೂಡಲೇ ವಿಜಯ್ ಅವರು ನೆರೆಹೊರೆಯವರಿಗೆ ಮಾಹಿತಿ ನೀಡಿ, ಹತ್ತಿರದ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವನ್ನಪ್ಪಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ತರುಣ್ ರಾಜ್‌ಗೋಪಾಲ್ ಎಂಬ ವ್ಯಕ್ತಿಯಿಂದ ವೈಷ್ಣವಿ ನನಗೆ ಹಣ ನೀಡಬೇಕೆಂದು ಸಂದೇಶ ಕಳುಹಿಸಿದ್ದ. ನೀವು ಯಾರು ಎಂದು ಪ್ರಶ್ನಿಸಿದಾಗ, ಸರಿಯಾಗಿ ಪ್ರತಿಕ್ರಿಯೆ ನೀಡಲಿಲ್ಲ. ಎರಡು ಬಾರಿ ಕರೆ ಮಾಡಿದರೂ ಪ್ರತಿಕ್ರಿಯೆ ನೀಡಲಿಲ್ಲ. ಪತ್ನಿಯನ್ನು ಪ್ರಶ್ನಿಸಿದಾಗ ತರುಣ್ ಕಿರುಕುಳ ನೀಡುತ್ತಿದ್ದಾನೆ. ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾನೆಂದು ಹೇಳಿದಳು ಎಂದು ವಿಜಯ್ ಅವರು ಹೇಳಿಕೆ ನೀಡಿದ್ದಾರೆ.

ತರುಣ್ ಹಣಕ್ಕಾಗಿ ಬೇಡಿಕೆ ಇಡಲು ಕಾರಣ ಮತ್ತು ಅವರ ಸಂಬಂಧ ಏನು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.