ಸಿಎಂ ಜೊತೆಗಿನ Breakfast ಮೀಟಿಂಗ್ ಬಳಿಕ ಡಿಕೆಶಿ ಟೆಂಪಲ್ ರನ್; ಭೂ ವರಾಹ ಸ್ವಾಮಿ ದೇಗುಲಕ್ಕೆ ಭೇಟಿ; ಹೋಮಕ್ಕೆ ಪೂರ್ಣಾಹುತಿ ಅರ್ಪಣೆ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿರುವ ಭೂ ವರಾಹನಾಥಸ್ವಾಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರು ಪತ್ನಿ ಜೊತೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರು: ಸಿಎಂ ಸ್ಥಾನದ ಕುರಿತು ಗೊಂದಲ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿನ ಉಪಹಾರ ಸಭೆ ಬಳಿಕ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ದೇವರ ಮೊರೆ ಹೋಗಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿರುವ ಭೂ ವರಾಹನಾಥಸ್ವಾಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರು ಪತ್ನಿ ಜೊತೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ದೇವಾಲಯದಲ್ಲಿ ನಡೆದ ಹೋಮಕ್ಕೆ ಪೂರ್ಣಾಹುತಿಯನ್ನು ಸಮರ್ಪಣೆ ಮಾಡಿದ್ದಾರೆ.
ಕಲ್ಲಹಳ್ಳಿ ಗ್ರಾಮದ ಭೂ ವರಾಹ ಸ್ವಾಮಿ ದೇವಾಲಯಕ್ಕೆ ಬಂದ ಡಿಕೆ.ಶಿವಕುಮಾರ್ ಅವರಿಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹೂ ಮಳೆ ಸುರಿಸಿ ಸ್ವಾಗತ ಕೋರಿದರು.
ದೇವಾಲಯಕ್ಕೆ ಹೋಗುವ ರಸ್ತೆಯ ಎರಡೂ ಬದಿಗಳಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಾಲುಗಟ್ಟಿ ನಿಂತು, ಬೆಂಗಾವಲು ಪಡೆ ದೇವಾಲಯದ ಆವರಣವನ್ನು ಪ್ರವೇಶಿಸುತ್ತಿದ್ದಂತೆ ಶಿವಕುಮಾರ್ ಅವರ ಪರ ಘೋಷಣೆಗಳನ್ನು ಕೂಗಿ, ಹೂಮಳೆ ಸುರಿಸಿ ಸ್ವಾಗತ ಕೋರಿದರು.
ಈ ವೇಳೆ ಮದ್ದೂರಿನಿಂದ ಕೊಥತ್ತಿಗೆ ಹೋಗುವ ಮಾರ್ಗದುದ್ದಕ್ಕೂ ಉಪಮುಖ್ಯಮಂತ್ರಿಯನ್ನು ಸ್ವಾಗತಿಸುವ ಪಕ್ಷದ ಧ್ವಜಗಳು ಮತ್ತು ಬ್ಯಾನರ್‌ಗಳು ರಾರಾಜಿಸುತ್ತಿರುವುದು ಕಂಡು ಬಂದಿತು.
ಭೂ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿಯ ದರ್ಶನ ಮತ್ತು ಹೋಮಕ್ಕೆ ಪೂರ್ಣಾಹುತಿಯನ್ನು ಸಮರ್ಪಣೆ ಮಾಡಿದ ನಂತರ, ದಂಪತಿಗಳು ದೇವಾಲಯದ ಅರ್ಚಕರಿಂದ ಪ್ರಸಾದ ಮತ್ತು ಆಶೀರ್ವಾದವನ್ನು ಪಡೆದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ನಾನು ಇಲ್ಲಿಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದೇನೆ ಅಷ್ಟೇ. ನಾನು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದಾಗಲೆಲ್ಲಾ ಭೂವರಾಹ ಸ್ವಾಮಿಯ ಆಶೀರ್ವಾದ ಪಡೆಯುತ್ತೇನೆ. ಪರಮಾತ್ಮನು ನನ್ನ ಮೇಲೆ ಮತ್ತು ಕರ್ನಾಟಕದ ಜನರ ಮೇಲೆ ಯಾವಾಗಲೂ ದಯೆ ತೋರಿಸಿದ್ದಾನೆಂದು ಹೇಳಿದರು.
ಎಲ್ಲೆಲ್ಲಿ ನನಗೆ ನಂಬಿಕೆ ಇದೆಯೋ ನಾನು ಹೋಗುತ್ತೇನೆ, ನಾನು ಎಲ್ಲಾ ಧರ್ಮದ ಮೇಲೆ ನಂಬಿಕೆ ಇಟ್ಟವನು, ನನೆಗ ಒಳ್ಳೆದಾಗಲಿ ಎಂದು ಕೆಲವರು ಪ್ರಾರ್ಥನೆ ಮಾಡ್ಕೊಂಡಿದ್ದಾರೆ, ಅವರೆಲ್ಲರ ಪ್ರಾರ್ಥನೆಗೂ ನಾನು ಗೌರವ ಕೊಡಬೇಕು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



