ಹುಣಸೂರು: ಅರಣ್ಯದ ಅಂಚಿನಲ್ಲಿ ತಿರುಗಾಡುತ್ತಿದ್ದ ಹುಲಿ, ನಾಲ್ಕು ಮರಿಗಳನ್ನು ಸೆರೆಹಿಡಿದ ಅರಣ್ಯ ಇಲಾಖೆ!
ಸುಮಾರು ಎರಡು ವರ್ಷಗಳ ಹಿಂದೆ ಎರಡು ವರ್ಷದ ಬಾಲಕನನ್ನು ಕೊಂದು ಹಾಕಿದ್ದ ಹುಲಿಯೇ ಇದಾಗಿದೆ ಎಂದು ನಂಬಲಾಗಿದೆ ಎಂದು ಅವರು ಹೇಳಿದರು.

ಮೈಸೂರು: ಅರಣ್ಯ ಪ್ರದೇಶದ ಅಂಚಿನಲ್ಲಿ ಅಲೆದಾಡುತ್ತಿದ್ದ ಹುಲಿ ಮತ್ತು ಅದರ ನಾಲ್ಕು ಮರಿಗಳನ್ನು ಸೆರೆಹಿಡಿಯಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಸುಮಾರು ಎರಡು ವರ್ಷಗಳ ಹಿಂದೆ ಎರಡು ವರ್ಷದ ಬಾಲಕನನ್ನು ಕೊಂದು ಹಾಕಿದ್ದ ಹುಲಿಯೇ ಇದಾಗಿದೆ ಎಂದು ನಂಬಲಾಗಿದೆ ಎಂದು ಅವರು ಹೇಳಿದರು.
ಹುಣಸೂರು ತಾಲ್ಲೂಕಿನ ಗೌಡನಕಟ್ಟೆ ಗ್ರಾಮದ ಹೊರವಲಯದಲ್ಲಿ ಹುಲಿ ಮತ್ತು ಅದರ ಮರಿಗಳನ್ನು ಸೆರೆಹಿಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅರಣ್ಯ ಇಲಾಖೆ ಪ್ರಕಾರ, ಮೊದಲಿಗೆ ಹುಲಿ ಕಾಡಿನ ಅಂಚಿನಿಂದ ಹೊರಗೆ ತಿರುಗಾಡುತ್ತಿರುವುದು ಕಂಡುಬಂದಿದೆ. ನಂತರ ನವೆಂಬರ್ 28 ರಂದು ಹುಲಿಯನ್ನು ಸೆರೆಹಿಡಿಯಲಾಗಿದೆ. ಆ ಪ್ರದೇಶದಲ್ಲಿ ಪದೇ ಪದೆ ಕಾಣಿಸಿಕೊಂಡ ನಂತರ ನಿವಾಸಿಗಳು ಭಯಭೀತರಾಗಿದ್ದರು.
ನಾಲ್ಕು ದಿನಗಳ ಹಿಂದೆ ಇಬ್ಬರು ರೈತರು ಹುಲಿ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದರು. ಇದರಿಂದಾಗಿ ಅರಣ್ಯ ಇಲಾಖೆಯು ಕಾರ್ಯಾಚರಣೆಯನ್ನು ತೀವ್ರಗೊಳಿಸಿತು.
ಸುಮಾರು ಆರು ತಿಂಗಳ ವಯಸ್ಸಿನ ಅದರ ನಾಲ್ಕು ಮರಿಗಳನ್ನು ಭಾನುವಾರ ಬೆಳಿಗ್ಗೆ ಪತ್ತೆ ಮಾಡಿ ರಕ್ಷಿಸಲಾಯಿತು. ಗ್ರಾಮದ ಹೊರವಲಯದ ಹೊಲಗಳಲ್ಲಿ ಅಡಗಿಕೊಂಡಿದ್ದ ಅವುಗಳನ್ನು ಶಾಂತಗೊಳಿಸಿ, ಪ್ರಾಥಮಿಕ ವೈದ್ಯಕೀಯ ಆರೈಕೆ ನೀಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಅರಣ್ಯ ಇಲಾಖೆಯ ಕಾರ್ಯಪಡೆಯು ನಾಲ್ಕು ಆನೆಗಳ ಬೆಂಬಲದೊಂದಿಗೆ ಕಾರ್ಯಾಚರಣೆಯನ್ನು ನಡೆಸಿತು. ನಂತರ ಮರಿಗಳನ್ನು ಅವುಗಳ ತಾಯಿಯೊಂದಿಗೆ ಮತ್ತೆ ಸೇರಿಸಲಾಯಿತು ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



