ರಾಜ್ಯ

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ  ಪರಿಹಾರ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published On :

ಮೈಸೂರು: ಈ ಬಾರಿಯ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಿಳಿಸಿದ್ದಾರೆ.

ಜಂಬೂ ಸವಾರಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.

ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದರು.

ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಸುಮಾರು 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲಬುರಗಿಯ ಭೇಟಿ ಸಂದರ್ಭದಲ್ಲಿ ತಿಳಿಸಿರುವುದಾಗಿ ಹೇಳಿದರು.

ಸರ್ಕಾರ ಮತ್ತು ಎನ್‌ಡಿಆರ್‌ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ ರೂ. 17,000 ರೂ., ನೀರಾವರಿ ಜಮೀನಿಗೆ 17,500 ರೂ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31,000 ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ ಹೆಚ್ಚಿನ ಮಳೆಯಿರುವುದರಿಂದ ಬೆಳೆಹಾನಿಯ ಜಂಟಿಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.