ನವೆಂಬರ್ ನಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರಾ?: ಕೋಡಿಮಠದ ಸ್ವಾಮೀಜಿ ಭವಿಷ್ಯ
ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂಬ ಮಾತುಗಳನ್ನು ಕಾಂಗ್ರೆಸ್ ನಾಯಕರೇ ಆಡುತ್ತಿದ್ದಾರೆ.

ಧಾರವಾಡ: ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂಬ ಮಾತುಗಳನ್ನು ಕಾಂಗ್ರೆಸ್ ನಾಯಕರೇ ಆಡುತ್ತಿದ್ದಾರೆ.
ಈ ಮಧ್ಯೆ ರಾಜ್ಯ, ದೇಶದ ಭವಿಷ್ಯ, ರಾಜಕಾರಣಿಗಳ ವಿಚಾರ, ಪ್ರಾಕೃತಿಕ ವಿಕೋಪಗಳ ಬಗ್ಗೆ ಭವಿಷ್ಯ ಹೇಳುವ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಧಾರವಾಡದಲ್ಲಿ (Dharwad) ಮಾತನಾಡುತ್ತಾ ನುಡಿದಿದ್ದಾರೆ.
ಸಂಕ್ರಾಂತಿವರೆಗೆ ಏನೂ ಹೇಳಲ್ಲ, ಸಿದ್ದರಾಮಯ್ಯ ಸರ್ಕಾರಕ್ಕೆ ಭಯವಿಲ್ಲ. ಉಳಿದದ್ದು ಸಂಕ್ರಾಂತಿ ಆದ ಮೇಲೆ ನೋಡಿ ಹೇಳಬೇಕು ಎಂದಿದ್ದಾರೆ. ಬಯಲು ಸೀಮೆಯಲ್ಲಿ ಮಲೆನಾಡು ಮಳೆ ಎಂದು ಈ ಹಿಂದೆ ಹೇಳಿದ್ದೆ. ಮಲೆನಾಡು ಬಯಲುಸೀಮೆ ಆಗಿದೆ, ಬಯಲುಸೀಮೆ ಮಲೆನಾಡು ಆಗಿದೆ ಎಂದು ಹೇಳಿದ್ದಾರೆ.
ದೇಶದಾದ್ಯಂತ ಹಬ್ಬಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜನ ಹಿತಕ್ಕಾಗಿ ನಡೆಯುತ್ತಿವೆ. ದಸರಾದ ನಿಜವಾದ ಅರ್ಥವೆಂದರೆ ದುಷ್ಟ ಶಕ್ತಿಗಳನ್ನು ದೂರವಿಡುವುದಾಗಿದೆ. ಮನುಷ್ಯ ತನ್ನಲ್ಲಿನ ಕೋಪ, ತಾಪ, ಆಸೆಗಳನ್ನು ಗೆಲ್ಲಬೇಕು. ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿ ಬೇಕು. ಈ ದೃಷ್ಟಿಯಿಂದ ದಸರಾವನ್ನು ಆಚರಿಸಲಾಗುತ್ತದೆ. ಇದು ನಮ್ಮ ಪರಂಪರೆಯ ದೊಡ್ಡ ಸಂಕೇತವಾಗಿ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



