ರಾಜ್ಯ

'ಶಕ್ತಿ ಯೋಜನೆ' ಮತ್ತೊಂದು ವಿಶ್ವದಾಖಲೆ: ಸಚಿವ ರಾಮಲಿಂಗಾ ರೆಡ್ಡಿ; ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಅಭಿನಂದನೆ

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಶಕ್ತಿʼಯೋಜನೆಯು International Book of Records-World Record of Excellence ಗೆ ಸೇರ್ಪಡೆಗೊಂಡು, ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

'ಶಕ್ತಿ ಯೋಜನೆ' ಮತ್ತೊಂದು ವಿಶ್ವದಾಖಲೆ: ಸಚಿವ ರಾಮಲಿಂಗಾ ರೆಡ್ಡಿ; ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಅಭಿನಂದನೆ
ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Published On :

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ‌ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ಗೆ (ಇಂಟರ್​​ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್​ ಗರಿ ಲಭಿಸಿದೆ.

500 ಕೋಟಿ‌ ಮಹಿಳಾ ಉಚಿತ ಪ್ರಯಾಣ ಬೆನ್ನಲ್ಲೇ ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ ಆಗಿದೆ. ಈ ಹಿನ್ನೆಲೆ ಮಹಿಳಾ ಪ್ರಯಾಣಿಕರು ಸೇರಿದಂತೆ ನಾಲ್ಕು ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಮಸ್ತ ಕನ್ನಡಿಗರು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಶಕ್ತಿʼಯು International Book of Records-World Record of Excellence ಗೆ ಸೇರ್ಪಡೆಗೊಂಡು, ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ, ಜೂನ್‌ 11, 2023 ರಿಂದ ಜುಲೈ 25, 2025ರ ಅವಧಿಯಲ್ಲಿ ಸಾರಿಗೆ ನಿಗಮದ ಬಸ್ಸುಗಳಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಸಾಧನೆಗಾಗಿ ಶಕ್ತಿ ಯೋಜನೆಯು ಈಗಾಗಲೇ ಪ್ರತಿಷ್ಠಿತ "Golden Book of World Records" ನಲ್ಲಿ ದಾಖಲಾಗಿದೆ. ಇದೀಗ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ವಿಶ್ವ ದಾಖಲೆ ಬರೆದಿದೆ ಎಂದು ಹೇಳಿದ್ದಾರೆ.

ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡಿದ್ದು, ಇದರಿಂದ ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ. ಸ್ತ್ರೀ ಸಬಲೀಕರಣದ ಮಹತ್ವದ ಹೆಜ್ಜೆಯಲ್ಲಿ ನಮ್ಮೊಂದಿಗೆ ಜೊತೆಯಾಗಿರುವ ಎಲ್ಲಾ ಹೆಣ್ಣುಮಕ್ಕಳಿಗೆ ಶಕ್ತಿ ಯೋಜನೆಯ ಸಾಧನೆಯ ಶ್ರೇಯ ಸಲ್ಲುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಸಾರಿಗೆ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.