ರಾಜ್ಯ

ಧರ್ಮಸ್ಥಳ ಪ್ರಕರಣ: ಸಮೀರ್ ಎಂ.ಡಿ ಸೇರಿ ಐವರು ಯೂಟ್ಯೂಬರ್ ಗಳಿಗೆ SIT ನೊಟೀಸ್

ಪ್ರಕರಣದಲ್ಲಿ ವಿವಾದಿತ ಯೂಟ್ಯೂಬರ್ ಸಮೀರ್ ಎಂಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ನೊಟೀಸ್ ನೀಡಲಾಗಿದ್ದು, ಅವರು ಬೆಳ್ತಂಗಡಿ ಎಸ್ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಧರ್ಮಸ್ಥಳ ಪ್ರಕರಣ: ಸಮೀರ್ ಎಂ.ಡಿ ಸೇರಿ ಐವರು ಯೂಟ್ಯೂಬರ್ ಗಳಿಗೆ SIT ನೊಟೀಸ್
ಎಸ್ ಐಟಿ ತನಿಖೆ
Published On :

ಧರ್ಮಸ್ಥಳ: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ಚುರುಕುಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್‌ಗಳಿಗೆ SIT ಅಧಿಕಾರಿಗಳು ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಪ್ರಕರಣದಲ್ಲಿ ವಿವಾದಿತ ಯೂಟ್ಯೂಬರ್ ಸಮೀರ್ ಎಂಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ನೊಟೀಸ್ ನೀಡಲಾಗಿದ್ದು, ಅವರು ಬೆಳ್ತಂಗಡಿ ಎಸ್ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಎಸ್ ಐಟಿ ಅಧಿಕಾರಿಗಳು ಈ ವಿಚಾರಣೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು,ಈ ಬಾರಿ ಯಾವೆಲ್ಲಾ ಪ್ರಶ್ನೆಗಳನ್ನು ಕೇಳಬೇಕು ಎಂಬುದರ ಕುರಿತು ಅಧಿಕಾರಿಗಳು ಪೂರ್ವ ಸಿದ್ಧತೆ ನಡೆಸಿದ್ದಾರೆ. ಈ ಹಿಂದಿನ ತನಿಖೆಯ ಸಂದರ್ಭದಲ್ಲಿ ಆರೋಪಿ ಚಿನ್ನಯ್ಯ ನೀಡಿದ ಹೇಳಿಕೆಗಳನ್ನು ಆಧರಿಸಿ ತನಿಖೆಯನ್ನು ಮುಂದುವರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.