ರಾಜ್ಯ

ತಬ್ಬಲಿ ಮೊಮ್ಮಗಳ ಉಜ್ವಲ ಭವಿಷ್ಯಕ್ಕಾಗಿ 'ಗೃಹಲಕ್ಷ್ಮಿ' ಹಣ ಸಂಗ್ರಹಿಸಿಟ್ಟ ಅಜ್ಜಿ!

ತಮ್ಮ ಖಾತೆಗೆ ಬಂದ ಗೃಹಲಕ್ಷ್ಮೀ ಯೋಜನೆಯ 23 ಕಂತುಗಳ ಹಣವನ್ನು ಖರ್ಚು ಮಾಡದೇ ಉಳಿಸಿಕೊಂಡು ಬಂದಿದ್ದಾರೆ.

ತಬ್ಬಲಿ ಮೊಮ್ಮಗಳ ಉಜ್ವಲ ಭವಿಷ್ಯಕ್ಕಾಗಿ 'ಗೃಹಲಕ್ಷ್ಮಿ' ಹಣ ಸಂಗ್ರಹಿಸಿಟ್ಟ ಅಜ್ಜಿ!
ಅಜ್ಜಿ-ಮೊಮ್ಮಗಳು
Published On :

ಕೊಪ್ಪಳ: ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಸಂಗ್ರಹಿಸಿಟ್ಟು ಅನೇಕ ಮಹಿಳೆಯರು ಅದನ್ನು ಸದುಪಯೋಗ ಮಾಡಿಕೊಂಡ ಉದಾಹರಣೆಗಳಿವೆ. ಇತ್ತೀಚೆಗೆ ಬೆಂಗಳೂರು ದಕ್ಷಿಣದ ರಾಮನಗರದಲ್ಲಿ ಗೃಹ ಲಕ್ಷ್ಮೀ ಹಣದಿಂದ ಮಹಿಳೆಯೊಬ್ಬರು ವಾಷಿಂಗ್‌ ಮೆಷಿನ್ ಖರೀದಿಸಿದ್ದು ಸುದ್ದಿಯಾಗಿತ್ತು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿ ಶಂಕ್ರಮ್ಮ ಎಂಬವರು ತಮ್ಮ ತಬ್ಬಲಿ ಮೊಮ್ಮಗಳು ರೇಖಾಳ ಉಜ್ವಲ ಭವಿಷ್ಯಕ್ಕೆ, ತಮ್ಮ ಖಾತೆಗೆ ಬಂದ ಗೃಹಲಕ್ಷ್ಮೀ ಯೋಜನೆಯ 23 ಕಂತುಗಳ ಹಣವನ್ನು ಖರ್ಚು ಮಾಡದೇ ಉಳಿಸಿಕೊಂಡು ಬಂದಿದ್ದಾರೆ.

ಅಜ್ಜಿ ಶಂಕ್ರಮ್ಮ ಗೃಹಲಕ್ಷ್ಮೀಯಿಂದ ಬಂದ ಸಂಪೂರ್ಣ ಹಣವನ್ನು ಮೊಮ್ಮಗಳು ರೇಖಾಳ ಹೆಸರಿನ ಖಾತೆಗೆ ಜಮಾ ಮಾಡಿದ್ದಾರೆ. ತಂದೆ ತಾಯಿ ಇಲ್ಲದೆ ಬೆಳೆದ ರೇಖಾಳ ಭವಿಷ್ಯ ಮತ್ತು ವಿದ್ಯಾಭ್ಯಾಸವನ್ನು ಸುರಕ್ಷಿತಗೊಳಿಸಲು ಈ ಹಣವನ್ನು ಎತ್ತಿಟ್ಟಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.