ರಾಜ್ಯ

ಬೆಂಗಳೂರು: ಬೃಹತ್ ಗಾತ್ರದ ಅರಳಿ ಮರ ಬಿದ್ದು ಸ್ಥಳದಲ್ಲೇ ಯುವತಿ ದುರ್ಮರಣ!

ಆಚಾರ್ಯ ಕಾಲೇಜು ಮೈದಾನದಲ್ಲಿ ನಡೆದ ಸ್ಯಾಂಡಲ್ವುಡ್ ಪ್ರೀಮಿಯರ್ ಲೀಗ್ ಪಂದ್ಯ ವೀಕ್ಷಿಸಿ ಸ್ನೇಹಿತನ ಜೊತೆ ಹೋಗುತ್ತಿದ್ದಾಗ ಬೃಹತ್ ಗಾತ್ರದ ಅರಳಿ ಮರ ಉರುಳಿ ಬಿದ್ದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಬೆಂಗಳೂರು: ಬೃಹತ್ ಗಾತ್ರದ ಅರಳಿ ಮರ ಬಿದ್ದು ಸ್ಥಳದಲ್ಲೇ ಯುವತಿ ದುರ್ಮರಣ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಆಚಾರ್ಯ ಕಾಲೇಜು ಮೈದಾನದಲ್ಲಿ ನಡೆದ ಸ್ಯಾಂಡಲ್ವುಡ್ ಪ್ರೀಮಿಯರ್ ಲೀಗ್ ಪಂದ್ಯ ವೀಕ್ಷಿಸಿ ಸ್ನೇಹಿತನ ಜೊತೆ ಹೋಗುತ್ತಿದ್ದಾಗ ಬೃಹತ್ ಗಾತ್ರದ ಅರಳಿ ಮರ ಉರುಳಿ ಬಿದ್ದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದ್ದು ಬೆಂಗಳೂರಿನ ಆರ್.ಟಿ. ನಗರದ 23 ವರ್ಷದ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮರಣೋತ್ತರ ಪರೀಕ್ಷೆಗಾಗಿ ಕೀರ್ತನಾ ಶವವನ್ನು ಸಪ್ತಗಿರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಕೀರ್ತನಾ ಸ್ನೇಹಿತೆ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.